ರಾಜ್ಯದಲ್ಲಿ ಖಾಲಿ ಇರುವ ಹದಿನೈದು ಸಾವಿರ ಶಿಕ್ಷಕರ ನೇಮಕಕ್ಕೆ ಶೀಘ್ರದಲ್ಲಿಯೇ ಅಧಿಸೂಚನೆ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ

ರಾಜ್ಯದಲ್ಲಿ ಖಾಲಿ ಇರುವ ಹದಿನೈದು ಸಾವಿರ ಶಿಕ್ಷಕರ ನೇಮಕಕ್ಕೆ ಶೀಘ್ರದಲ್ಲಿಯೇ ಅಧಿಸೂಚನೆ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ
Published by Basavaraj Halli
11 ಡಿಸೆಂಬರ್ 2021 KTET & GPSTR
ಕರ್ನಾಟಕ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸಲು ಒಟ್ಟು ಹದಿನೈದು ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರವು ನಿರ್ಧರಿಸಿರುವುದಾಗಿ ಮಾನ್ಯ ಶಿಕ್ಷಣ ಸಚಿವರಾದ ಬಿ ಸಿ ನಾಗೇಶ್ ಅವರು ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿರುತ್ತಾರೆ.
ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದಗಳ ಪದವೀಧರ ಪ್ರಾಥಮಿಕ ಶಾಲಾ (6 ರಿಂದ 8) ಶಿಕ್ಷಕರ ಹತ್ತು ಸಾವಿರ ಹುದ್ದೆಗಳು ಹಾಗೂ ಕಲ್ಯಾಣ ಕರ್ನಾಟಕ ವೃಂದದ ಪದವೀಧರ ಪ್ರಾಥಮಿಕ ಶಾಲಾ (6 ರಿಂದ 8) ಶಿಕ್ಷಕರ 5 ಸಾವಿರ ಹುದ್ದೆಗಳ ಭರ್ತಿಗಾಗಿ ಕೆಲವೇ ದಿನಗಳಲ್ಲಿ ನೇಮಕ ಪ್ರಕ್ರಿಯೆಗೆ ಅಧಿಸೂಚನೆ ಹೊರಡಿಸಲಾಗುವುದಾಗಿ ತಿಳಿಸಿರುತ್ತಾರೆ. ಈ ಮೂಲಕ ರಾಜ್ಯದಲ್ಲಿರುವ ಶಿಕ್ಷಕರ ಕೊರತೆಯನ್ನು ನೀಗಿಸಿ ಶಿಕ್ಷಣದ ಗುಣಮಟ್ಟ ಕಾಪಾಡಲು ನಿರ್ಧರಿಸಲಾಗಿದೆ. ಹಾಗೂ ಈಗಾಗಲೇ ರಾಜ್ಯದಲ್ಲಿ 23 ಸಾವಿರ ಅತಿಥಿ ಶಿಕ್ಷಕರ ಸೇವೆಯನ್ನು ಪಡೆಯಲಾಗುತ್ತಿದ್ದು, ಹೆಚ್ಚುವರಿಯಾಗಿ 4 ಸಾವಿರ ಅತಿಥಿ ಶಿಕ್ಷಕರ ಸೇವೆಯನ್ನು ಪಡೆಯಲು ಕೂಡ ನಿರ್ಧರಿಸಿರುವುದಾಗಿ ಅವರು ಮಾಹಿತಿ ನೀಡಿರುತ್ತಾರೆ.
ರಾಜ್ಯದಲ್ಲಿರುವ ಶಿಕ್ಷಕರ ಹುದ್ದೆಗಳ ಆಕಾಂಕ್ಷಿಗಳು ಈಗಿನಿಂದಲೇ ಉತ್ತಮ ತಯಾರಿಯನ್ನು ನಡೆಸಿ ಮುಂಬರುವ ನೇಮಕಾತಿ ಪ್ರಕ್ರಿಯೆಯಲ್ಲಿ ಯಶಸ್ವಿಯಾಗಿ ಎಂದು KPSCVaani ಯು ಶುಭಹಾರೈಸುತ್ತದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.