Loading..!

ಕರ್ನಾಟಕ ರಾಜ್ಯ ಸಿವಿಲ್ ಪೋಲಿಸ್ ಕಾನ್ ಸ್ಟೇಬಲ್ (ಪುರುಷ ಮತ್ತು ಮಹಿಳಾ) 163 (ಹೈ-ಕ) ಹುದ್ದೆಗಳ ನೇಮಕಾತಿ ಸಂಬಂಧಿಸಿದಂತೆ ಲಿಖಿತ ಪರೀಕ್ಷೆ ದಿನಾಂಕ ನಿಗದಿ..!
| Date:4 ಆಗಸ್ಟ್ 2019
Image not found
ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (ಪುರುಷ ಮತ್ತು ಮಹಿಳೆ) 163 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಈಗಾಗಲೇ ಅಧಿಸೂಚನೆ ಪ್ರಕಟವಾಗಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಕೂಡ ಮುಕ್ತಾಯಗೊಂಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಬೇಕಾಗಿದ್ದು, ಆದ್ದರಿಂದ ದಿನಾಂಕ 22-09-2019 ರಂದು ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (ಪುರುಷ & ಮಹಿಳಾ) ಹುದ್ದೆಗಳ ಲಿಖಿತ ಪರೀಕ್ಷೆಯನ್ನು ಈ ಕೆಳಗೆ ನೀಡಿರುವ ರಾಜ್ಯದ ವಿವಿಧ ನಗರಗಳಲ್ಲಿ ನಡೆಸಲು ತಾತ್ಕಾಲಿಕವಾಗಿ ನಿಗದಿಪಡಿಸಲಾಗಿದೆ ಎಂದು ರಾಜ್ಯ ಪೊಲೀಸ ಇಲಾಖೆ ಮೂಲಗಳಿಂದ ತಿಳಿದು ಬಂದಿದೆ. ಆದರೆ ಈ ಕುರಿತು ಯಾವುದೇ ಅಧಿಕೃತ ಅಧಿಸೂಚನೆ ಪ್ರಕಟಗೊಂಡಿಲ್ಲ.

ಲಿಖಿತ ಪರೀಕ್ಷೆ ಬರೆಯುವ ಅಂದಾಜು ಅಭ್ಯರ್ಥಿಗಳ ಸಂಖ್ಯೆ ಮತ್ತು ಪರೀಕ್ಷಾ ಕೇಂದ್ರಗಳು
===================
✍ ಬೆಂಗಳೂರು- 20,000
✍ ಕಲಬುರಗಿ- 7,500
✍ ಬೀದರ್-5,200
✍ ಯಾದಗಿರಿ-4,600
✍ ಬಳ್ಳಾರಿ-6,000
✍ ರಾಯಚೂರು-8,600
✍ ಕೊಪ್ಪಳ- 5,100

ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಉತ್ತಮ ತಯಾರಿಗಾಗಿ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಅಭ್ಯಸಿಸುವದು ಕೂಡ ಬಹು ಮುಖ್ಯ ಪಾತ್ರ ವಹಿಸುತ್ತದೆ. ಹಾಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಈ ಹಿಂದೆ ರಾಜ್ಯ ಪೊಲೀಸ್ ಇಲಾಖೆ ನಡೆಸಿದ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಡೌನ್ಲೋಡ್ ಮಾಡಿಕೊಳ್ಳಿ ಉತ್ತಮ ತಯಾರಿ ನಡೆಸಿ
ಈ ರಕ್ಷಾ ಬಂಧನದಲ್ಲಿ ಉತ್ತಮ ದರ್ಜೆಯ ರಾಖಿಗಳನ್ನು amazon ನಿಂದ ರಿಯಾಯಿತಿ ದರದಲ್ಲಿ ಕೊಂಡುಕೊಳ್ಳಿ

Comments