ಕರ್ನಾಟಕ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳು ಶೀಘ್ರದಲ್ಲಿ ನೇಮಕ..!

ಕರ್ನಾಟಕ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-2 ಮತ್ತು  ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳು ಶೀಘ್ರದಲ್ಲಿ ನೇಮಕ..!
23 ಆಗಸ್ಟ್ 2019 PDO
ಕರ್ನಾಟಕ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಪ್ರಸ್ತುತ ಖಾಲಿ ಇರುವ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಕೋಟಾದಡಿ ನೇಮಕ ಮಾಡಿಕೊಳ್ಳುವ ಬಗ್ಗೆ ಮಾಹಿತಿ ನಿಮಗಾಗಿ. ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ನೇರ ನೇಮಕಾತಿ ಕೋಟಾದ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡುವ ಸಲುವಾಗಿ ದಿನಾಂಕ 01-08-2019 ರಂದು ಅನ್ವಯಿಸುವಂತೆ ತಮ್ಮ ಜಿಲ್ಲಾ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್ 2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ವೃಂದದ ಮೇಲೆ ನೇರ ನೇಮಕಾತಿ ಕೋಟಾದ ಹುದ್ದೆಗಳ ಬಗ್ಗೆ ಮಾಹಿತಿ ನೀಡುವಂತೆ ಎಲ್ಲ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯಿಂದ ಕೋರಲಾಗಿದೆ. ಖಾಲಿ ಹುದ್ದೆಗಳ ವಿವರಗಳು ಇಲಾಖೆಗೆ ತಲುಪಿದ ತಕ್ಷಣವೇ ಇಲಾಖೆಯು ಈ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಿದೆ ಎಂದು ತಿಳಿದು ಬಂದಿದೆ, ಕಾರಣ ಅಭ್ಯರ್ಥಿಗಳು ಈ ಕ್ಸಣದಿಂದಲೇ ಉತ್ತಮ ತಯಾರಿ ಆರಂಭಿಸಿ ಹುದ್ದೆಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿ.
PDO ಮತ್ತು GPS ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.