ಶಿಕ್ಷಣ ಇಲಾಖೆಯಲ್ಲಿನ ಹುದ್ದೆಗಳ ನಿರೀಕ್ಷೆಯಲ್ಲಿದ್ದ ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ ಇದೀಗ ಸಿಹಿಸುದ್ದಿ ಬಂದಿದ್ದು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 7,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಶಿಕ್ಷಣ ಇಲಾಖೆಯು ನಿರ್ಧರಿಸಿದೆ. ಈ ಹಿಂದೆ 2022-23ರ ಸಾಲಿನಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 6ರಿಂದ 8ನೇ ತರಗತಿಗಾಗಿ 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಸಲಾಗಿತ್ತು. ಈ ಪೈಕಿ 13352 ಅರ್ಹ ಅಭ್ಯರ್ಥಿಗಳು ಆಯ್ಕೆಯಾಗಿದೆ. 2023 ರ ಶೈಕ್ಷಣಿಕ ವರ್ಷದಲ್ಲಿ 4985 ಶಿಕ್ಷಕರು ನಿವೃತ್ತಿಯನ್ನು ಹೊಂದಿದ್ದಾರೆ. ಇದರಲ್ಲಿ 2,500 ಹುದ್ದೆಗಳನ್ನು ಭರ್ತಿ ಮಾಡಲು ಇಲಾಖೆ ನಿರ್ಧರಿಸಿದೆ. ಅದರಿಂದಾಗಿ ಈಗ 7500 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಕ್ರಮ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
- ಕೊರೋನಾ ಸಂದರ್ಭದಲ್ಲಿ ಸರ್ಕಾರದ ಹುದ್ದೆಗಳ ಭರ್ತಿಗೆ ನಿಯಂತ್ರಣ ಹಾಕಲಾಗಿತ್ತು, ಇದೀಗ ಮುಖ್ಯ ಮಂತ್ರಿಯವರೊಂದಿಗೆ ಸಮಾಲೋಚನೆ ನಡೆಸಿ ಹೊಸ ನೇಮಕಾತಿಗೆ ಅವಕಾಶ ಮಾಡಿ ಕೊಳ್ಳಲಾಗುತ್ತದೆ. ಹೊಸ ವರ್ಷ ಅಥವಾ ಬಜೆಟ್ ಸಂದರ್ಭದಲ್ಲಿ ಶುಭ ಸುದ್ದಿ ನಿರೀಕ್ಷಿಸಬಹುದು ಎಂದು ಹಣಕಾಸು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
Comments