ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ IRB ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ದೈಹಿಕ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ
07 ಸೆಪ್ಟೆಂಬರ್ 2019
Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ದಿನಾಂಕ 07 ಜೂನ್ 2019 ರಂದು ಇಲಾಖೆಯಲ್ಲಿ ಖಾಲಿ ಇರುವ IRB ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿತ್ತು. ಪ್ರಸ್ತುತ IRB ಪೊಲೀಸ್ ಸಬ್ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯ ಮೊದಲ ಹಂತವಾದ ದೈಹಿಕ ಪರೀಕ್ಷೆಯ ದಿನಾಂಕವನ್ನು ಇಲಾಖೆಯು ನಿಗದಿಪಡಿಸಿದೆ, ಈ ಹುದ್ದೆಗಳ ದೈಹಿಕ ಪರೀಕ್ಷೆಯನ್ನು ಈ ಮೊದಲು ಆಗಸ್ಟ್ ತಿಂಗಳ 16 ಮತ್ತು 17 ನೇ ತಾರೀಕಿನಂದು ನಡೆಸಲು ತೀರ್ಮಾನಿಸಲಾಗಿತ್ತಾದರೂ ಆಡಳಿತಾತ್ಮಕ ಕಾರಣಗಳಿಂದಾಗಿ ಮುಂದೂಡಲಾಗಿತ್ತು ಪ್ರಸ್ತುತ ಈ ಹುದ್ದೆಗಳ ದೈಹಿಕ ಪರೀಕ್ಷೆಯನ್ನು ಪರೀಕ್ಷೆಯ ದಿನಾಂಕವನ್ನು ಇಲಾಖೆಯು ನಿಗದಿಪಡಿಸಿ ಅಭ್ಯರ್ಥಿಗಳ ಪ್ರವೇಶಪತ್ರಗಳನ್ನು ಜಾಲತಾಣದಲ್ಲಿ ಪ್ರಕಟಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು ಹಾಗೂ ಪ್ರವೇಶ ಪತ್ರದಲ್ಲಿ ತಿಳಿಸಿದ ದಿನಾಂಕ ಹಾಗೂ ಸ್ಥಳದಲ್ಲಿ ಕಡ್ಡಾಯವಾಗಿ ಹಾಜರಾಗಲು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.