ಕರ್ನಾಟಕ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸಲು ಒಟ್ಟು 5,500 ದೈಹಿಕ ಶಿಕ್ಷಣ ಶಿಕ್ಷಕರ ನೇಮಕಕ್ಕೆ ಸಿದ್ಧತೆ ನಡೆದಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿರುತ್ತಾರೆ. ಸರಕಾರಿ ಪ್ರಾಥಮಿಕ, ಪದವಿಪೂರ್ವ ಕಾಲೇಜುಗಳಿಗೆ ಮತ್ತು ಪ್ರೌಢಶಾಲಾ ಶಿಕ್ಷಕರು ಸೇರಿದಂತೆ ಒಟ್ಟಾರೆ 5,500 ಶಿಕ್ಷಕರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅನುಮತಿ ಕೋರಿ ಈ ನೇಮಕ ಪ್ರಕ್ರಿಯೆಗೆ ಹಣಕಾಸು ಇಲಾಖೆಯ ಒಪ್ಪಿಗೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಈಗಾಗಲೇ ಶಿಕ್ಷಣ ಇಲಾಖೆಯು ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಪ್ರಾರಂಭಿಸಿದೆ, ಅನುಮತಿ ಸಿಕ್ಕ ತಕ್ಷಣ ಅಧಿಸೂಚನೆ ಪ್ರಕಟಿಸಲಿದೆ. ದೈಹಿಕ ಶಿಕ್ಷಣ ಮಾತ್ರವಲ್ಲ, ಚಿತ್ರಕಲಾ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಇಲಾಖೆಗೆ 40 ಸಾವಿರ ಶಿಕ್ಷಕರ ಅಗತ್ಯವಿದ್ದು, ಹಂತ ಹಂತವಾಗಿ ನೇಮಕ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು.
ಒಟ್ಟು ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು : 5,500
ರಾಜ್ಯದ ಪ್ರಾಥಮಿಕ ಶಾಲೆಗಳಿಗೆ : 2,000
ಪ್ರೌಢಶಾಲೆಗಳಿಗೆ : 1,500
ಪದವಿಪೂರ್ವ ಕಾಲೇಜುಗಳಿಗೆ : 2,000
Comments