ರಾಜ್ಯ ಪೊಲೀಸ್ ಇಲಾಖೆಯ ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿನ ಸಬ್ ಇನ್ಸ್ಪೆಕ್ಟರ್ ಮತ್ತು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ಅವಧಿಯನ್ನು ಪೊಲೀಸ್ ಇಲಾಖೆಯು ವಿಸ್ತರಿಸಿದೆ.
ಈಗ ಅಭ್ಯರ್ಥಿಗಳು ಜುಲೈ 01 2019 ರವರೆಗೂ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ ಪಾವತಿಸಲು ಜುಲೈ 03 2019ರವರೆಗೆ ಕಾಲಾವಕಾಶವಿರುತ್ತದೆ. ಈ ಮೊದಲು ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸಲು ಜೂನ್ 24 ಕೊನೆಯ ದಿನವೆಂದು ಪ್ರಕಟಿಸಲಾಗಿತ್ತು, ಹೆಚ್ಚಿನ ಅಭ್ಯರ್ಥಿಗಳಿಗೆ ಅವಕಾಶ ದೊರೆಯಲಿ ಎಂದು ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಪೊಲೀಸ್ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಿಶೇಷ ರಿಸರ್ವ್ ಕಾನ್ ಸ್ಟೇಬಲ್ 218 ಹುದ್ದೆಗಳು ಮತ್ತು ಸಬ್ ಇನ್ಸ್ ಪೆಕ್ಟರ್ 23 ಹುದ್ದೆಗಳಿಗೆ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬಹುದು.

Comments