Karnataka State Police 25 ಜೂನ್ 2019 7 years ago

ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಮತ್ತು ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಮತ್ತು ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ರಾಜ್ಯ ಪೊಲೀಸ್ ಇಲಾಖೆಯ ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿನ ಸಬ್ ಇನ್ಸ್ಪೆಕ್ಟರ್ ಮತ್ತು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ಅವಧಿಯನ್ನು ಪೊಲೀಸ್ ಇಲಾಖೆಯು ವಿಸ್ತರಿಸಿದೆ. ಈಗ ಅಭ್ಯರ್ಥಿಗಳು ಜುಲೈ 01 2019 ರವರೆಗೂ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ ಪಾವತಿಸಲು ಜುಲೈ 03 2019ರವರೆಗೆ ಕಾಲಾವಕಾಶವಿರುತ್ತದೆ. ಈ ಮೊದಲು ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸಲು ಜೂನ್ 24 ಕೊನೆಯ ದಿನವೆಂದು ಪ್ರಕಟಿಸಲಾಗಿತ್ತು, ಹೆಚ್ಚಿನ ಅಭ್ಯರ್ಥಿಗಳಿಗೆ ಅವಕಾಶ ದೊರೆಯಲಿ ಎಂದು ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಪೊಲೀಸ್ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ವಿಶೇಷ ರಿಸರ್ವ್ ಕಾನ್ ಸ್ಟೇಬಲ್ 218 ಹುದ್ದೆಗಳು ಮತ್ತು ಸಬ್ ಇನ್ಸ್ ಪೆಕ್ಟರ್ 23 ಹುದ್ದೆಗಳಿಗೆ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬಹುದು.
Official Notifications & Links
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.