2019-20 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ(PUC) ಖಾಲಿ ಇರುವ ಉಪನ್ಯಾಸಕರುಗಳ ಹುದ್ದೆಗಳಿಗೆ ನೇಮಕಾತಿ

2019-20 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ(PUC) ಖಾಲಿ ಇರುವ ಉಪನ್ಯಾಸಕರುಗಳ ಹುದ್ದೆಗಳಿಗೆ ನೇಮಕಾತಿ
24 ಆಗಸ್ಟ್ 2019 Karnataka Examination Authority
ಈ ಮೇಲೆ ಶೀರ್ಷಿಕೆಯಲ್ಲಿ ತಿಳಿಸಿದಂತೆ ಸರ್ಕಾರದ ಆದೇಶದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರುಗಳನ್ನು ನೇಮಕಾತಿ ಮಾಡಿಕೊಳ್ಳಲು ಮಾರ್ಗಸೂಚಿಗಳನ್ನು ನಿಗದಿಪಡಿಸಲಾಗಿದ್ದು, ಸರ್ಕಾರದ ಆದೇಶದಲ್ಲಿ ಅತಿಥಿ ಉಪನ್ಯಾಸಕರಿಗೆ ಮಾಸಿಕ 9000/- ಗೌರವ ಧನವನ್ನು ನಿಗದಿಪಡಿಸಲಾಗಿರುತ್ತದೆ. 2019-20 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 3407 ಉಪನ್ಯಾಸಕರ ಹುದ್ದೆಗಳು ಖಾಲಿ ಇರುತ್ತವೆ. ಈ ಪೈಕಿ 1203 ಉಪನ್ಯಾಸಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯು ಚಾಲ್ತಿಯಲ್ಲಿದ್ದು ಇನ್ನೂ ಅಂತಿಮ ಗೊಂಡಿರುವುದಿಲ್ಲ, ಆದ್ದರಿಂದ ಪ್ರಸಕ್ತ ಸಾಲಿನಲ್ಲಿ ಒಟ್ಟು 3407 ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಬೇಕಾಗುತ್ತದೆ. ಪ್ರತಿ ಅತಿಥಿ ಉಪನ್ಯಾಸಕರುಗಳಿಗೆ ಮಾಸಿಕ ರೂಪಾಯಿ 9000/- ರೂಪಾಯಿಗಳನ್ನು ನಿಗದಿಪಡಿಸಲಾಗಿದೆ. ಈ ಕುರಿತು ಕರ್ನಾಟಕ ಸರ್ಕಾರ ಪ್ರಕಟಿಸಿರುವ ನಡವಳಿಯನ್ನು ಈ ಕೆಳಗೆ ನೀಡಿರುವ ಲಿಂಕ್ ನಲ್ಲಿ ಒದಗಿಸಲಾಗಿದ್ದು ಅಭ್ಯರ್ಥಿಗಳು ಮಾಹಿತಿಗಾಗಿ ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು
Useful Links
to download official announcement
Official notification attachment
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.