ಕರ್ನಾಟಕ ರಾಜ್ಯ ಸರಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಕ್ಕೆ 2015 ರ ಮೇನಲ್ಲಿ ಹೊರಡಿಸಿದ್ದ ಅಧಿಸೂಚನೆಗೆ ಸಂಬಂಧಿಸಿದಂತೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಇದರಿಂದಾಗಿ ಅಧಿಸೂಚನೆ ಪ್ರಕಟಗೊಂಡ ಸುಮಾರು ನಾಲ್ಕು ವರ್ಷ ಮೂರು ತಿಂಗಳ ನಂತರ ನೇಮಕ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಂತಾಗಿದ್ದು ವಿಷಯವಾರು ಆಯ್ಕೆಯಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ನೀಡಲಾಗಿದೆ. ಪಟ್ಟಿಯಲ್ಲಿ ಅಭ್ಯರ್ಥಿಗಳ ಹೆಸರು, ರಿಜಿಸ್ಟ್ರಾರ್ ನಂಬರ್, ಜನ್ಮದಿನಾಂಕ, ಮೀಸಲಾತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಮಾಹಿತಿಯನ್ನು ಒದಗಿಸಲಾಗಿದೆ. ಈ ಆಯ್ಕೆಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕೂಡ ಅವಕಾಶ ನೀಡಲಾಗಿದ್ದು ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಅಂಚೆಯ ಮೂಲಕ ಅಥವಾ ಖುದ್ದಾಗಿ ತಮ್ಮ ಆಕ್ಷೇಪಣೆ ಸಲ್ಲಿಸಬಹುದಾಗಿದೆ.
ಸೆಪ್ಟೆಂಬರ್ 06 ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನವಾಗಿದೆ. ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು KEA ಸ್ಪಷ್ಟಪಡಿಸಿದೆ. ಒಟ್ಟು 1193 ಉಪನ್ಯಾಸಕರ ಹುದ್ದೆಗೆ ನೇಮಕ ನಡೆಯುತ್ತಿದ್ದು ಒಂದು ಅನುಪಾತ ಒಂದರಂತೆ ಈಗ ಆಯ್ಕೆ ಪಟ್ಟಿ ಪ್ರಕಟಗೊಂಡಿದೆ.
ಮರಾಠಿ ಉಪನ್ಯಾಸಕರ ಹುದ್ದೆಗೆ KEA ಆಗಸ್ಟ್ 14 ರಂದು ದಾಖಲೆ ಪರಿಶೀಲನೆ ನಡೆಸಿದ್ದು, ಕೆಲ ಅಭ್ಯರ್ಥಿಗಳು ಅನರ್ಹರಾಗಿರುವ ಕಾರಣ ಬೇರೆ ಅಭ್ಯರ್ಥಿಗಳಿಗೆ ಆಗಸ್ಟ್ 31 ರಂದು ದಾಖಲೆ ಪರಿಶೀಲನೆ ನಡೆಸುವುದಾಗಿ ಪ್ರಕಟಿಸಿದೆ.
ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Comments