ಕರ್ನಾಟಕ ರಾಜ್ಯದ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 4689 PU ಉಪನ್ಯಾಸಕರ (PU Lecturer's) ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ!

ಕರ್ನಾಟಕ ರಾಜ್ಯದ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 4689 PU ಉಪನ್ಯಾಸಕರ (PU Lecturer's) ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ!
Published by Yallamma G
04 ಜೂನ್ 2025 Others

ಹಲವು ವರ್ಷಗಳಿಂದ ಉಪನ್ಯಾಸಕರ ಹುದ್ದೆ ನಿರೀಕ್ಷೆಯಲ್ಲಿದ್ದ, ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ ಇದೀಗ ಸಿಹಿಸುದ್ದಿ ಬಂದಿದ್ದು, ಕರ್ನಾಟಕ ರಾಜ್ಯದ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗಳ ನೇಮಕ ಮಾಡಿಕೊಳ್ಳಲು ಸರಕಾರ ಆದೇಶ ಹೊರಡಿಸಿದೆ, ಒಟ್ಟು 4,689 ಉಪನ್ಯಾಸಕರ ಹುದ್ದೆಗಳು ಭರ್ತಿಮಾಡಿಕೊಳ್ಳಲಿದೆ. 

           ರಾಜ್ಯದ ಪಿಯು ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಅಗತ್ಯತೆಗೆ 5,752 ಅಥಿತಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಮತ್ತು ಅತಿಥಿ ಉಪನ್ಯಾಸಕರಿಗೆ ಗೌರವಧನಕ್ಕಾಗಿ ಅನುದಾನ ಬಿಡುಗಡೆ ಮಾಡುವಂತೆ ಪಿಯು ಇಲಾಖೆಯು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರ, ವಿವಿಧ ವೃಂದದ ಉಪನ್ಯಾಸಕರ ಹುದ್ದೆಗಳಿಗೆ ಎದುರಾಗಿ 4,689 ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಸರಕಾರವು ನಿರ್ಧರಿಸಿದೆ ಎಂದು ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.