ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯು 2020-21ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಹಿತದೃಷ್ಟಿಯಿಂದ ದಿನಾಂಕ 24 ಮೇ 2021ರಿಂದ ಆರಂಭಿಸಬೇಕಿದ್ದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಮುಂದೂಡಲಾಗಿದೆ.
ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ಪರೀಕ್ಷೆಯನ್ನು ನಡೆಸಲು ನಿಗದಿಪಡಿಸುವ ದಿನಾಂಕಕ್ಕೆ ಕನಿಷ್ಠ ಹದಿನೈದು ದಿನಗಳ ಮುಂಚಿತವಾಗಿ ಪ್ರಕಟಿಸಲಾಗುವುದು ಹಾಗೂ ದ್ವಿತೀಯ ಪಿಯುಸಿ ಪರೀಕ್ಷಾ ವಿಷಯಕ್ಕೆ ಸಂಬಂಧಿಸಿದಂತೆ ಏನಾದರೂ ಮಾಹಿತಿಗಳಿದ್ದಲ್ಲಿ ಇಲಾಖೆಯು ಕಾಲ ಕಾಲಕ್ಕೆ ಮಾರ್ಗಸೂಚಿಗಳನ್ನು ಹೊರಡಿಸುವುದಾಗಿ ಪ್ರಕಟಣೆಯನ್ನು ಹೊರಡಿಸಿದೆ.
* 2020-21ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿಗೆ ದಾಖಲಾದ ಎಲ್ಲ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಗೆ ತೇರ್ಗಡೆ ಎಂದು ಪರಿಗಣಿಸಲಾಗುವುದು ಎಂದು ಇದೇ ವೇಳೆ ಇಲಾಖೆಯು ತೀರ್ಮಾನ ಕೈಗೊಂಡಿದೆ
- ಈ ಕುರಿತ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಇಲಾಖೆಯು ಪ್ರಕಟಿಸಿದ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ.
Ganesh Rk Rk Ganesh
10 ಮೇ 2021, 08:17 ಪೂರ್ವಾಹ್ನJob
Chiranjivi V
04 ಮೇ 2021, 08:43 ಅಪರಾಹ್ನSuppers sir proud of you are chanel KPSC vani sir