ಬೆಂಗಳೂರು : ಕೋವಿಡ್-19 ಲಾಕ್ ಡೌನ್ ಕಾರಣದಿಂದ ಮುಂದೂಡಲಾಗಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಸುರೇಶ ಕುಮಾರ ಅವರು ಜೂನ್ 25 ರಿಂದ ಜುಲೈ 4 ರವರೆಗೆ SSLC ಪರೀಕ್ಷೆ ನಡೆಸುವದಾಗಿ ತಿಳಿಸಿದರು ಜೊತೆಗೆ ಬಾಕಿ ಉಳಿದಿರುವ ಪಿಯುಸಿಯ ಇಂಗ್ಲೀಷ್ ಪರೀಕ್ಷೆಯನ್ನು ಜೂನ್ 18 ರಂದು ನಡೆಸಲು ಸರಕಾರ ತೀರ್ಮಾನಿಸಿದೆ.
SSLC ಯ ಇಂಗ್ಲೀಷ್, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆಗಳಿಗೆ ಒಂದೊಂದು ದಿನದ ಅಂತರವಿರಲಿದ್ದು ಒಟ್ಟು 10 ದಿನದಲ್ಲಿ ಪರೀಕ್ಷೆ ಮುಗಿಯಲಿದೆ. ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಪರೀಕ್ಷಾ ಕೇಂದ್ರದಲ್ಲಿ ಕೈಗೊಳ್ಳುವುದಾಗಿ ಇದೆ ವೇಳೆ ಸಚಿವರು ತಿಳಿಸಿದರು.
** ವಿಷಯವಾರು ವೇಳಾಪಟ್ಟಿ ಶೀಘ್ರದಲ್ಲೇ ಬಿಡುಗಡೆಯಾಗುವದು ನಿರೀಕ್ಷಿಸಿ

Comments