Others 18 ಮೇ 2020 6 years ago
Published by Basavaraj Halli

ಕರ್ನಾಟಕ ಸರ್ಕಾರದಿಂದ SSLC ಹಾಗೂ PUC ಪರೀಕ್ಷಾ ವೇಳಾಪಟ್ಟಿ ಪ್ರಕಟ

ಕರ್ನಾಟಕ ಸರ್ಕಾರದಿಂದ SSLC ಹಾಗೂ PUC ಪರೀಕ್ಷಾ ವೇಳಾಪಟ್ಟಿ ಪ್ರಕಟ
ಬೆಂಗಳೂರು : ಕೋವಿಡ್-19 ಲಾಕ್ ಡೌನ್ ಕಾರಣದಿಂದ ಮುಂದೂಡಲಾಗಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಸುರೇಶ ಕುಮಾರ ಅವರು ಜೂನ್ 25 ರಿಂದ ಜುಲೈ 4 ರವರೆಗೆ SSLC ಪರೀಕ್ಷೆ ನಡೆಸುವದಾಗಿ ತಿಳಿಸಿದರು ಜೊತೆಗೆ ಬಾಕಿ ಉಳಿದಿರುವ ಪಿಯುಸಿಯ ಇಂಗ್ಲೀಷ್ ಪರೀಕ್ಷೆಯನ್ನು ಜೂನ್ 18 ರಂದು ನಡೆಸಲು ಸರಕಾರ ತೀರ್ಮಾನಿಸಿದೆ. SSLC ಯ ಇಂಗ್ಲೀಷ್, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆಗಳಿಗೆ ಒಂದೊಂದು ದಿನದ ಅಂತರವಿರಲಿದ್ದು ಒಟ್ಟು 10 ದಿನದಲ್ಲಿ ಪರೀಕ್ಷೆ ಮುಗಿಯಲಿದೆ. ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಪರೀಕ್ಷಾ ಕೇಂದ್ರದಲ್ಲಿ ಕೈಗೊಳ್ಳುವುದಾಗಿ ಇದೆ ವೇಳೆ ಸಚಿವರು ತಿಳಿಸಿದರು. ** ವಿಷಯವಾರು ವೇಳಾಪಟ್ಟಿ ಶೀಘ್ರದಲ್ಲೇ ಬಿಡುಗಡೆಯಾಗುವದು ನಿರೀಕ್ಷಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.