Loading..!

ರಾಜ್ಯದಲ್ಲಿ 5267 ಶಿಕ್ಷಕರ ಹುದ್ದೆಗಳ ನೇಮಕಾತಿ ಶೀಘ್ರದಲ್ಲೇ..! ಈ ಕುರಿತು ಮಾಹಿತಿ ನಿಮಗಾಗಿ
Published by: Yallamma G | Date:15 ಅಕ್ಟೋಬರ್ 2024
Image not found
ಕರ್ನಾಟಕ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುತ್ತಿದೆ. ಈ ನೇಮಕಾತಿಯ ಮೂಲಕ ರಾಜ್ಯದ ವಿವಿಧ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನಿವಾರಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಈ ಹುದ್ದೆಗಳು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಸಂಬಂಧಿಸಿದಂತೆ ಇರುವುದಾಗಿ ತಿಳಿದುಬಂದಿದೆ.

  ಒಂದರಿಂದ ಐದನೇ ತರಗತಿಗೆ (ಪ್ರಾಥಮಿಕ ಶಾಲಾ ಶಿಕ್ಷಕರು) 4,424 ಶಿಕ್ಷಕರು, ಆರರಿಂದ ಎಂಟನೇ ತರಗತಿಗೆ (ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು) 78 ಹಾಗೂ 380 ದೈಹಿಕ ಶಿಕ್ಷಣ ಶಿಕ್ಷಕರು (ಗ್ರೇಡ್-2) ಸೇರಿದಂತೆ ಒಟ್ಟು 5,267 ಹುದ್ದೆಗಳಿಗೆ ನೇಮಕ ಮಾಡಲಾಗುತ್ತಿದೆ.

ಅಭ್ಯರ್ಥಿಗಳು ಈ ಅಧಿಸೂಚನೆಗಾಗಿ ರಾಜ್ಯ ಸರ್ಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ದೃಷ್ಟಿಯಿಟ್ಟುಕೊಳ್ಳಬೇಕು. ಅರ್ಜಿ ಸಲ್ಲಿಸುವ, ಆಯ್ಕೆ ಪ್ರಕ್ರಿಯೆ ಮತ್ತು ಪರೀಕ್ಷೆಗಳ ತಾರೀಕುಗಳ ಕುರಿತು ವಿವರಗಳನ್ನು ಅಧಿಸೂಚನೆಯಲ್ಲೇ ಉಲ್ಲೇಖಿಸಲಾಗುವುದು. ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆ, ವಯೋಮಿತಿ ಮತ್ತು ಇತರ ಅವಶ್ಯಕತೆಯನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಬಹುದಾಗಿದೆ.

  ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಿಗೆ ಮಂಜೂರಾಗಿರುವ ಒಟ್ಟು ಹುದ್ದೆಗಳಲ್ಲಿ ಸದ್ಯ 6,584 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಅವುಗಳಲ್ಲಿ ಶೇ.80ರಷ್ಟನ್ನು ಭರ್ತಿ ಮಾಡಲಾಗುತ್ತಿದೆ. 2024-25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿದಂತೆ ಸರಕಾರ ಈ ನಿರ್ಧಾರ ಕೈಗೊಂಡಿದೆ. ಶೀಘ್ರದಲ್ಲಿಯೇ ಈ ಹುದ್ದೆಗಳ ಭರ್ತಿಗೆ ಸರ್ಕಾರ ಅಧಿಸೂಚನೆ ಹೊರಡಿಸುವ ನಿರೀಕ್ಷೆಯಿದೆ.

Comments