ಕರ್ನಾಟಕ ರಾಜ್ಯದ ವಿವಿಧ ಕಾಲೇಜುಗಳಲ್ಲಿ ಖಾಲಿ ಇರುವ 1,033 ಹುದ್ದೆಗಳ ಮತ್ತು ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುತ್ತಿದೆ. ಈ ನೇಮಕಾತಿಯ ಮೂಲಕ ರಾಜ್ಯದ ವಿವಿಧ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳ ಕೊರತೆಯನ್ನು ನಿವಾರಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.
ಉನ್ನತ ಶಿಕ್ಷಣಕ್ಕೆ ಪ್ರಸಕ್ತ ಬಜೆಟ್‌ನಲ್ಲಿ 5,862 ಕೋಟಿ ಅನುದಾನ ಒದಗಿಸಲಾಗಿದ್ದು, ಈವರೆಗೆ 3,713 ಕೋಟಿ ರೂ (ಶೇ72.87) ಬಳಕೆಯಾಗಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬಜೆಟ್‌ನಲ್ಲಿ 250 ಕೋಟಿ ನೀಡಲಾಗಿದೆ. ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಅಭ್ಯರ್ಥಿಗಳು ಈ ಅಧಿಸೂಚನೆಗಾಗಿ ರಾಜ್ಯ ಸರ್ಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ದೃಷ್ಟಿಯಿಟ್ಟುಕೊಳ್ಳಬೇಕು. ಅರ್ಜಿ ಸಲ್ಲಿಸುವ, ಆಯ್ಕೆ ಪ್ರಕ್ರಿಯೆ ಮತ್ತು ಪರೀಕ್ಷೆಗಳ ತಾರೀಕುಗಳ ಕುರಿತು ವಿವರಗಳನ್ನು ಅಧಿಸೂಚನೆಯಲ್ಲೇ ಉಲ್ಲೇಖಿಸಲಾಗುವುದು. ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆ, ವಯೋಮಿತಿ ಮತ್ತು ಇತರ ಅವಶ್ಯಕತೆಯನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಬಹುದಾಗಿದೆ.
Comments