Loading..!

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (TET) ಯ ಪ್ರವೇಶ ಪತ್ರಗಳು ಇದೀಗ ಪ್ರಕಟ | ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ
Published by: Yallamma G | Date:20 ಜೂನ್ 2024
Image not found

2024ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ದಿನಾಂಕ30 ಜೂನ್ 2024ರ ಭಾನುವಾರದಂದು ಎರಡು ಅಧಿವೇಶನಗಳಲ್ಲಿ (ಪತ್ರಿಕೆ 1 ಮತ್ತು ಪತ್ರಿಕೆ 2) ನಡೆಯಲಿದ್ದು, ಸದರಿ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಂಡು ನಿಗದಿತ ದಿನಾಂಕದಂದು ಪರೀಕ್ಷಾ ಸ್ಥಳಗಳಲ್ಲಿ ಹಾಜರಿರಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
- ಆಯಾ ಜಿಲ್ಲೆಯ ಉಪನಿರ್ದೇಶಕರು (ಆಡಳಿತ), ಶಾಲಾ ಶಿಕ್ಷಣ ಇಲಾಖೆ ಹಾಗೂ ಪರೀಕ್ಷಾನೋಡಲ್ ಅಧಿಕಾರಿಗಳ ದೂರವಾಣಿ ಸಂಖ್ಯೆಯನ್ನು ಪ್ರಕಟಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗೆ ಅವರನ್ನು ಸಂಪರ್ಕಿಸಬಹುದು ಎಂದು ಕೇಂದ್ರೀಕೃತ ದಾಖಲಾತಿ ಘಟಕದ ವಿಶೇಷಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- KARTET 2024 ಪರೀಕ್ಷಾ ಪ್ರವೇಶ ಪಾತ್ರವನ್ನು ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.

Comments