ಶಿಕ್ಷಕರ ಅರ್ಹತಾ ಪರೀಕ್ಷೆ (KAR-TET) ಯನ್ನು ಬರುವ ಅಕ್ಟೋಬರ್ ತಿಂಗಳ 4 ನೇ ತಾರೀಕಿನಂದು ನಡೆಸಲು ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ತೀರ್ಮಾನಿಸಿರುವುದಾಗಿ ಪ್ರಾಥಮಿಕ ಹಾಗು ಪ್ರೌಢ ಶಿಕ್ಷಣ ಸಚಿವರಾದ ಎಸ್. ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಈ ಮೊದಲು ಜು. 12 ಕ್ಕೆ ಪರೀಕ್ಷೆಯನ್ನು ನಿಗದಿಪಡಿಸಲಾಗಿತ್ತಾದರೂ, ಕೊರೋನಾ ಸಾಂಕ್ರಾಮಿಕ ಹರಡುವಿಕೆ ಹಿನ್ನಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿತ್ತು, ಇದೀಗ ಎಲ್ಲ ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಪರೀಕ್ಷೆ ನಡೆಸಲಾಗುವುದೆಂದೂ, ಹಾಗು ಅಭ್ಯರ್ಥಿಗಳು ಪೂರ್ವ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಸಚಿವರು ತಿಳಿಸಿದ್ದಾರೆ.
Praveenkumar Chimlapur
26 ಆಗಸ್ಟ್ 2020, 04:26 ಅಪರಾಹ್ನHlo