Loading..!

KPSC ಯಾ KAS ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆ ಮತ್ತೆ ಮುಂದೂಡಲಾಗಿದೆ..| ಈ ಕುರಿತ ಮಾಹಿತಿ ನಿಮಗಾಗಿ
Published by: Basavaraj Halli | Date:27 ಜೂನ್ 2024
Image not found
2024 ಮೇ-5 ರಂದು ನಂತರ ಜುಲೈ-21 ರಂದು ನಡೆಸಲು ಉದ್ದೇಶಿಸಲಾಗಿದ್ದ 384 ಗೆಜೆಟೆಡ್ ಪ್ರೊಬೆಷನರ್ಸ (KAS) ಹುದ್ದೆಗಳ Prelims Exam ನ್ನು ಇದೀಗ 3ನೇ ಬಾರಿ ಮುಂದೂಡಿ, 2024 ಅಗಸ್ಟ್-25 ರಂದು ನಡೆಸಲು ದಿನಾಂಕ ಮರು ನಿಗದಿಪಡಿಸಲಾಗಿದೆ.

2017-18 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಯಸ್ಸಿನ ನಿರ್ಬಂಧವಿಲ್ಲದೆ, ಒಂದು ಬಾರಿಗೆ ಸೀಮಿತಗೊಳಿಸಿ ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಿ 2023-24ನೇ ಸಾಲಿನ ಗೆಜೆಟೆಡ್ ಪ್ರೊಫೆಷನಲ್ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗ ಇದೀಗ 15 ದಿನಗಳ ಕಾಲಾವಕಾಶವನ್ನು ನೀಡುವಂತೆ ಆದೇಶಿಸುರುತ್ತದೆ. 

ಈ ಹಿನ್ನೆಲೆಯಲ್ಲಿ 2023-24ನೇ ಸಾಲಿನ KAS ನ ಒಟ್ಟು 384 ಹುದ್ದೆಗಳಿಗೆ ದಿನಾಂಕ 21-07-2024 ರಂದು ನಡೆಸಬೇಕಿದ್ದ ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ 25-8-2024 ರಂದು ನಡೆಸಲು ಮರು ನಿಗದಿಪಡಿಸಲಾಗಿರುತ್ತದೆ. 

ಈ ಕುರಿತ ಅಧಿಕೃತ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ಮೂಲಕ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿರುತ್ತದೆ.

Comments