Loading..!

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚಿಸಲಾದ 1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ | ಅರ್ಜಿ ಸಲ್ಲಿಕೆ ನಿಯಮ ಸಡಿಲಿಕೆ
Published by: Basavaraj Halli | Date:22 ಅಕ್ಟೋಬರ್ 2021
Image not found
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಒಟ್ಟು 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಕ್ಕೆ ಈಗಾಗಲೇ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆ ಪ್ರಕಿಯೆಯಲ್ಲಿ ಇದೀಗ ಕೆಲ ಬದಲಾವಣೆಗಳನ್ನು ಮಾಡಿದ್ದು, ಈ ಕುರಿತ ಮಾಹಿತಿ ನಿಮಗಾಗಿ

* 2021 ರಲ್ಲಿ ಸ್ನಾತಕೋತ್ತರ ಪದವಿ ಉತ್ತೀರ್ಣರಾದ ಅಭ್ಯರ್ಥಿಗಳು, NET/SLET ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು, ಹಾಗೂ ಸರ್ಕಾರಿ ಹುದ್ದೆಯಲ್ಲಿದ್ದು, ಅರ್ಜಿ ಸಲ್ಲಿಸಲು ನಿರಾಕ್ಷೇಪಣ ಪತ್ರ (NOC) ಪಡೆಯದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆಂದು KEA ಪ್ರಕಟಣೆಯಲ್ಲಿ ತಿಳಿಸಿದೆ.
* ಈ ಕುರಿತು ವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

* ಈ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು 06 ನವೆಂಬರ್ 2021 ಕೊನೆಯ ದಿನಾಂಕವಾಗಿರುತ್ತದೆ ಅಭ್ಯರ್ಥಿಗಳು ಆದಷ್ಟು ಬೇಗನೆ ಅರ್ಜಿ ಸಲ್ಲಿಸಿ ಉತ್ತಮ ತಯಾರಿ ನಡೆಸಿ.

Comments