Loading..!

KEA ಯಿಂದ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿದ ಶೈಕ್ಷಣಿಕ ವಿದ್ಯಾರ್ಹತೆ ಇದೀಗ ಪ್ರಕಟ
Published by: Bhagya R K | Date:6 ಎಪ್ರಿಲ್ 2024
Image not found

* ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA) 20/02/2024 ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಈ ಕುರಿತು ಪ್ರಕಟಣೆಯಲ್ಲಿ ಹೊರಡಿಸಿರುವ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಶೈಕ್ಷಣಿಕ ವಿದ್ಯಾರ್ಹತೆಯನ್ನು ಇಲಾಖೆಯು ಇದೀಗ ಪ್ರಕಟಿಸಿದೆ. 
ಶೈಕ್ಷಣಿಕ ವಿದ್ಯಾರ್ಹತೆಯ ಪ್ರಕಾರ : 
- ಸಿಬಿಎಸ್‌ಸಿ ಮತ್ತು ಐಸಿಎಸ್‌ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ.
-  ಇತರೆ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ಪರೀಕ್ಷೆ.
- ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್.ಐ.ಓ.ಎಸ್) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್/ ಹೆಚ್.ಎಸ್.ಸಿ.
- ಮೂರು ವರ್ಷಗಳ ಡಿಪ್ಲೋಮಾ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ (ಜೆ.ಓ.ಸಿ/ಜೆ.ಓ.ಡಿ.ಸಿ/ಜೆ.ಎಲ್.ಡಿ.ಸಿ) ವ್ಯಾಸಂಗವನ್ನು ತತ್ಸಮನ ವಿದ್ಯಾರ್ಹತೆ ಎಂದು ಪರಿಗಣಿಸಲಾಗಿದೆ ಎಂದು KEA ತಿಳಿಸಿದೆ.

Comments