Loading..!

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವಿವಿಧ ಇಲಾಖೆಗಳಲ್ಲಿನ ಹುದ್ದೆಗಳ ಪರೀಕ್ಷಾ ದಿನಾಂಕ ಇದೀಗ ಪ್ರಕಟ | ಈ ಕುರಿತು ಮಾಹಿತಿ ನಿಮಗಾಗಿ
Published by: Bhagya R K | Date:25 ಮೇ 2024
Image not found

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವಿವಿಧ ಇಲಾಖೆ ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಈಗಾಗಲೇ ಅಧಿಸೂಚಿನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು ಮತ್ತು ಸಾವಿರಾರು ಅಭ್ಯರ್ಥಿಗಳು ಈಗಾಗಲೇ ಅರ್ಜಿ ಸಲ್ಲಿಸಿ ಆಗಿದೆ. ಪ್ರಸ್ತುತ ವಿವಿಧ ಇಲಾಖೆಗಳಲ್ಲಿನ ಹುದ್ದೆಗಳಿಗೆ ನಡೆಯುವ ಲಿಖಿತ ಪರೀಕ್ಷೆಯ ದಿನಾಂಕವನ್ನು KEA ಯು ನಿಗದಿಪಡಿಸಿದ್ದು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ. 


- ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಗ್ರಾಮ ಆಡಳಿತ ಅಧಿಕಾರಿ (ಕಂದಾಯ ಇಲಾಖೆ) 1000 ಹುದ್ದೆಗಳ ನೇಮಕಾತಿಗಾಗಿ 21 ಫೆಬ್ರುವರಿ 2024 ರಂದು ಅಧಿಸೂಚನೆ ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು, ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ KEA ಯು ಇದೀಗ ತಾತ್ಕಾಲಿಕ ಸ್ಪರ್ಧಾತ್ಮಕ ಪರೀಕ್ಷಾ ದಿನಾಂಕವನ್ನು ನಿಗದಿಪಡಿಸಿದೆ.  ದಿನಾಂಕ  ದಿನಾಂಕ 27 ಅಕ್ಟೋಬರ್ 2024 ರಂದು ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿದೆ. 


- ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪೊಲೀಸ್ ಇಲಾಖೆಯ (ಸಬ್ ಇನ್ ಸ್ಪೆಕ್ಟರ್) 402 ಹುದ್ದೆಗಳ ನೇಮಕಾತಿಗಾಗಿ 03 ಮಾರ್ಚ್ 2021 ರಂದು ಅಧಿಸೂಚನೆ ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು, ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ KEA ಯು ಇದೀಗ ತಾತ್ಕಾಲಿಕ ಸ್ಪರ್ಧಾತ್ಮಕ ಪರೀಕ್ಷಾ ದಿನಾಂಕವನ್ನು ನಿಗದಿಪಡಿಸಿದೆ.  ದಿನಾಂಕ 22 ಸೆಪ್ಟೆಂಬರ್ 2024 ರಂದು ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿದೆ. 


- ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನಿರ್ವಾಹಕ- ದರ್ಜೆ-3 ಮೇಲ್ವಿಚಾರಕೇತರ 2,500 ಹುದ್ದೆಗಳ ನೇಮಕಾತಿಗಾಗಿ 03 ಏಪ್ರಿಲ್ 2024 ರಂದು ಅಧಿಸೂಚನೆ ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು, ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ KEA ಯು ಇದೀಗ ತಾತ್ಕಾಲಿಕ ಸ್ಪರ್ಧಾತ್ಮಕ ಪರೀಕ್ಷಾ ದಿನಾಂಕವನ್ನು ನಿಗದಿಪಡಿಸಿದೆ.  ದಿನಾಂಕ01-09-2024 ರಂದು ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿದೆ. 


- ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಹಾಯಕ ಲೆಕ್ಕಿಗ, ಸಹಾಯಕ ಸಂಚಾರ ನಿರೀಕ್ಷಕ, ಕುಶಲಕರ್ಮಿ, ತಾಂತ್ರಿಕ ಸಹಾಯಕ ಸೇರಿದಂತೆ 36 ಹುದ್ದೆಗಳ ನೇಮಕಾತಿಗಾಗಿ 17 ಆಗಸ್ಟ್ 2022 ರಂದು ಅಧಿಸೂಚನೆ ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು, ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ KEA ಯು ಇದೀಗ ತಾತ್ಕಾಲಿಕ ಸ್ಪರ್ಧಾತ್ಮಕ ಪರೀಕ್ಷಾ ದಿನಾಂಕವನ್ನು ನಿಗದಿಪಡಿಸಿದೆ.  ದಿನಾಂಕ 01-09-2024 ರಂದು ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿದೆ. ದಿನಾಂಕ 12,13 ಮತ್ತು 14- ಜುಲೈ -2024 ರ ವರೆಗೆ ಪರೀಕ್ಷೆ ನಡೆಸಲು ದಿನಾಂಕವನ್ನು ನಿರ್ಧರಿಸಲಾಗಿದೆ. 


- ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಎಂಜಿನಿಯರ್-ಸಿವಿಲ್, ಪ್ರಥಮ ದರ್ಜೆ ಲೆಕ್ಕ ಸಹಾಯಕರ ಗ್ರೂಪ್-ಸಿ 64 ಹುದ್ದೆಗಳ ನೇಮಕಾತಿಗಾಗಿ 05 ಫೆಬ್ರುವರಿ 2024 ರಂದು ಅಧಿಸೂಚನೆ ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು, ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ KEA ಯು ಇದೀಗ ತಾತ್ಕಾಲಿಕ ಸ್ಪರ್ಧಾತ್ಮಕ ಪರೀಕ್ಷಾ ದಿನಾಂಕವನ್ನು ನಿಗದಿಪಡಿಸಿದೆ.  ದಿನಾಂಕ 11- ಆಗಸ್ಟ್ -2024 ರಂದು ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿದೆ.  


* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪರೀಕ್ಷಾ ದಿನಾಂಕವನ್ನು ವೀಕ್ಷಿಸಬಹುದಾಗಿದೆ.

Comments