Loading..!

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚಿಸಿದ GTTC ಲಿಖಿತ ಪರೀಕ್ಷೆಯ ಅಂತಿಮ ಕೀ ಉತ್ತರಗಳು ಇದೀಗ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ
Published by: Bhagya R K | Date:23 ಡಿಸೆಂಬರ್ 2024
Image not found

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸರ್ಕಾರಿ ಉಪಕರಣಾಗಾರ & ತರಬೇತಿ ಕೇಂದ್ರ (GTTC) ಹುದ್ದೆಗಳ ನೇಮಕಾತಿಗಾಗಿ 20/02/2024 ರಂದು ಅಧಿಸೂಚನೆ ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. 


          ಸರ್ಕಾರಿ ಉಪಕರಣಾಗಾರ & ತರಬೇತಿ ಕೇಂದ್ರ (GTTC) ಹುದ್ದೆಗಳ ನೇಮಕಾತಿಯ ಮುಂದಿನ ಹಂತವಾದ ಲಿಖಿತ (ನಿರ್ಧಿಷ್ಟ ಪತ್ರಿಕೆ) ಪರೀಕ್ಷೆಯನ್ನು KEA ಯು ದಿನಾಂಕ 2024 ಡಿಸೆಂಬರ್-9, 10, 11 & 14 ವರೆಗೆ ರಾಜ್ಯ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ KEA ಇಲಾಖೆಯು ತನ್ನ ಜಾಲತಾಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳ ಸರಿ ಉತ್ತರಗಳನ್ನು ಪ್ರಕಟಿಸಲಾಗಿತ್ತು. 


             ಪ್ರಕಟಿಸಲಾದ ಸರಿ ಉತ್ತರಗಳಿಗೆ ಏನಾದರು ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 17-12-2024 ರಂದು ಸಂಜೆ 05:00 ಗಂಟೆಯೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಅದರಂತೆ ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ಆಕ್ಷೇಪಣೆಗಳನ್ನು ಪರಿಶೀಲಿಸಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಅಂತಿಮವಾಗಿ ಪರಿಷ್ಕೃತ ಕೀ ಉತ್ತರಗಳನ್ನು ಇದೀಗ ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. 


* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಪರಿಷ್ಕೃತ ಕೀ ಉತ್ತರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

Comments