ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸರ್ಕಾರಿ ಉಪಕರಣಾಗಾರ & ತರಬೇತಿ ಕೇಂದ್ರ (GTTC) ಹುದ್ದೆಗಳ ನೇಮಕಾತಿಗಾಗಿ 20/02/2024 ರಂದು ಅಧಿಸೂಚನೆ ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳ ನೇಮಕಾತಿಯ ಮೊದಲ ಹಂತವಾದ ಕಡ್ಡಾಯ ಕನ್ನಡ ಲಿಖಿತ ಪರೀಕ್ಷೆಯನ್ನು ದಿನಾಂಕ 29 -ಸೆಪ್ಟೆಂಬರ್-2024 ರಂದು ರಾಜ್ಯದ 1,410 ಕೇಂದ್ರಗಳಲ್ಲಿ ಯಶಸ್ವಿಯಾಗಿ ಲಿಖಿತ ಪರೀಕ್ಷೆಯನ್ನು ನಡೆಸಿ ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಲಾಗಿತ್ತು.
ಸರ್ಕಾರಿ ಉಪಕರಣಾಗಾರ & ತರಬೇತಿ ಕೇಂದ್ರ (GTTC) ಹುದ್ದೆಗಳ ನೇಮಕಾತಿಯ ಮುಂದಿನ ಹಂತವಾದ ಲಿಖಿತ (ನಿರ್ಧಿಷ್ಟ ಪತ್ರಿಕೆ) ಪರೀಕ್ಷೆಯನ್ನು KEA ಯು ದಿನಾಂಕ 2024 ಡಿಸೆಂಬರ್-9, 10, 11 & 14 ವರೆಗೆ ನಡೆಸಲಿದ್ದು ಇದೀಗ ಪರೀಕ್ಷೆಯ ಪ್ರವೇಶ ಪತ್ರವನ್ನು ಕೂಡಾ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಪ್ರವೇಶ ಪತ್ರವನ್ನು Download ಮಾಡಿಕೊಳ್ಳಬಹುದಾಗಿದೆ. ಪರೀಕ್ಷಾ ಕೇಂದ್ರದಲ್ಲಿ Frisking ಮತ್ತು Bio-mertic ತಪಾಸಣೆ ನಡೆಸಲಾಗುವುದರಿಂದ ಒಂದು ಘಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರದೊಳಗೆ ಹಾಜರಿರತಕ್ಕದ್ದು.
ಒಂದೇ ಪರೀಕ್ಷಾ ವಿಧಾನ, ಒಂದೇ ವಿದ್ಯಾರ್ಹತೆ ಮತ್ತು ಒಂದೇ ಪಠ್ಯಕ್ರಮದ ಎರಡೂ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳು ಯಾವುದಾದರು ಒಂದು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗಿ, ಗೈರು ಹಾಜರಾದ ಪ್ರವೇಶ ಪತ್ರದೊಂದಿಗೆ ಪರೀಕ್ಷೆಗೆ ಹಾಜರಾದ ಪ್ರವೇಶ ಪತ್ರವನ್ನು ಲಗತ್ತಿಸಿ ದಿನಾಂಕ 18.12.2024 ರೊಳಗೆ ಪ್ರಾಧಿಕಾರಕ್ಕೆ ಕಡ್ಡಾಯವಾಗಿ ಸಲ್ಲಿಸತಕ್ಕದ್ದು.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪ್ರವೇಶ ಪಾತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
Comments