ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ(KEA) ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿನ ವಿವಿಧ ಹುದ್ದೆಗಳ ನೇಮಕಾತಿಯ ಕೀ ಉತ್ತರಗಳು ಇದೀಗ ಪ್ರಕಟ
Published by: Yallamma G | Date:26 ಮಾರ್ಚ್ 2025
Image not found

          ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ಕಂಪ್ಯೂಟರ್ ಆಪರೇಟರ್, ಅಸಿಸ್ಟೆಂಟ್ & ಜೂನಿಯರ್ ಅಸಿಸ್ಟೆಂಟ್, ಡೇಟಾ ಎಂಟ್ರಿ ಅಸಿಸ್ಟೆಂಟ್, ಸೀನಿಯರ್ ಪ್ರೋಗ್ರಾಮರ್ ಮತ್ತು ಜೆನಿಯರ್ ಪ್ರೋಗ್ರಾಮರ್ ಸೇರಿದಂತೆ    ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.


        ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 22.03.2025 ರಿಂದ 25.03.2025ರ ವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗಿದ್ದು. ಸದರಿ ಪರೀಕ್ಷೆಗಳ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿರುತ್ತದೆ.


           ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಆನ್‌ಲೈನ್ ಪೋರ್ಟಲ್ ಮೂಲಕ ಮಾತ್ರವೇ ದಿನಾಂಕ:28/03/2025 ಸಂಜೆ 5:00 ರೊಳಗೆ ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿರುತ್ತದೆ. ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್. ಪ್ರಶ್ನೆ ಸಂಖ್ಯೆ ಹಾಗೂ ಪೂರಕ ದಾಖಲೆಗಳನ್ನು PDF ರೂಪದಲ್ಲಿ ಸಲ್ಲಿಸಬೇಕು. ಸಲ್ಲಿಸಲಾಗುವ ಪ್ರತಿ ಆಕ್ಷೇಪಣೆಗೆ 50/- ರೂ.ಗಳನ್ನು ಪಾವತಿಸತಕ್ಕದ್ದು ಹಾಗೂ ಆಕ್ಷೇಪಣಾ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ. ನಿಗದಿತ ಅವಧಿಯೊಳಗೆ ಮೇಲ್ಕಂಡ ಮಾಹಿತಿಯನ್ನು ಸಲ್ಲಿಸದ ಅಥವಾ ಶುಲ್ಕ ಪಾವತಿಸದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.

Comments