ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವಿವಿಧ ಹುದ್ದೆಗಳ ನೇಮಕಾತಿಯ ಕೀ ಉತ್ತರಗಳು ಇದೀಗ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವಿವಿಧ ಹುದ್ದೆಗಳ ನೇಮಕಾತಿಯ ಕೀ ಉತ್ತರಗಳು ಇದೀಗ ಪ್ರಕಟ
Published by Yallamma G
15 ಫೆಬ್ರವರಿ 2023 Others

* ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇತ್ತೀಚೆಗೆ ನಡೆಸಿದ ಸೈನಿಕ ಕಲ್ಯಾಣ & ಪುನರ್ವಸತಿ ಇಲಾಖೆ (DSWR)ಯಲ್ಲಿನ ದ್ವಿತೀಯ ದರ್ಜೆ ಸಹಾಯಕ(SDA) ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 30/01/2023 ಮತ್ತು 01/02/2023 ರಂದು  ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿತ್ತು.
* ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇತ್ತೀಚೆಗೆ ನಡೆಸಿದ ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ (KSSCL)ದಲ್ಲಿನ ಸಹಾಯಕ ವ್ಯವಸ್ಥಾಪಕರು, ಕಿರಿಯ ಸಹಾಯಕರು ಮತ್ತು ಬೀಜ ಸಹಾಯಕರು ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 30/01/2023 ರಿಂದ  05/02/2023 ರವರೆಗೆ  ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿತ್ತು.
ಈ ಸ್ಪರ್ಧಾತ್ಮಕ ಪರೀಕ್ಷೆಗಳ ತಾತ್ಕಾಲಿಕ ಕೀ ಉತ್ತರಗಳನ್ನು ಇದೀಗ ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ. ಸದರಿ ಕೀ ಉತ್ತರಗಳಲ್ಲಿ ಏನಾದರು ಆಕ್ಷೇಪಣೆಗಳಿದ್ದರೆ ದಿನಾಂಕ 14/02/2023 ರಿಂದ 22/02/2023 ವರೆಗೆ ಆಧಾರಸಹಿತ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿರುತ್ತದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.