KPSC 08 ಆಗಸ್ಟ್‍ 2025 1 year ago
Published by Yallamma G

KPSCಯಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ದಾಖಲಾತಿ ಪರಿಶೀಲನೆಗಾಗಿ ಅರ್ಹತೆಪಡೆದ ಅಭ್ಯರ್ಥಿಗಳ ಅರ್ಹತಾ ಪಟ್ಟಿ ಇದೀಗ ಪ್ರಕಟ

KPSCಯಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ದಾಖಲಾತಿ ಪರಿಶೀಲನೆಗಾಗಿ  ಅರ್ಹತೆಪಡೆದ ಅಭ್ಯರ್ಥಿಗಳ ಅರ್ಹತಾ ಪಟ್ಟಿ ಇದೀಗ ಪ್ರಕಟ

               ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 15-03-2024 ರಂದು ಅಧಿಸೂಚಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹೈದರಾಬಾದ್ ಕರ್ನಾಟಕ ಸ್ಥಳೀಯ ವೃಂದದ 97 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. 

               ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ನೇಮಕಾತಿಯ ಮುಂದಿನ ಹಂತವಾದ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ದಿನಾಂಕ 08-ಡಿಸೆಂಬರ್-2024 ರಂದು ರಾಜ್ಯ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ. 08-12-2024ರಂದು ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಜ್ಞಾನ ಪತ್ರಿಕೆ-1 ಮತ್ತು ಪತ್ರಿಕೆ-2 ರ ಕೀ-ಉತ್ತರಗಳನ್ನು ದಿನಾಂಕ: 24-02-2025 ರಂದು ಪ್ರಕಟಿಸಿ, ಅಭ್ಯರ್ಥಿಗಳು ಕೀ-ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ: 03-03-2025 ರವರೆಗೆ ಕಾಲಾವಕಾಶವನ್ನು ನೀಡಲಾಗಿತ್ತು. ಅದರಂತೆ, ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿ, ಸಾಮಾನ್ಯ ಜ್ಞಾನ ಪತ್ರಿಕೆ-1 ಮತ್ತು ಪತ್ರಿಕೆ-2 ಗಳಿಗೆ ಸಂಬಂಧಿಸಿದಂತೆ ಅಂತಿಮವಾಗಿ ಪರಿಷ್ಕೃತಗೊಳ್ಳುತ್ತಿರುವ ಕೀ-ಉತ್ತರಗಳನ್ನು KPSC ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿತ್ತು.  

            ಸದರಿ ಹುದ್ದೆಗಳಿಗೆ ಸಂಬಂಧಿಸಿದಂತೆ ಇದೀಗ KPSC ಯು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹೈದರಾಬಾದ್ ಕರ್ನಾಟಕ ಸ್ಥಳೀಯ ವೃಂದದ 97 ಹುದ್ದೆಗಳ ದಾಖಲೆಗಳ ಪರಿಶೀಲನೆಗೆ 1:3 ಅನುಪಾತದಲ್ಲಿ ಅರ್ಹತೆಪಡೆದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಇದೀಗ KPSC ವೆಬ್ ಸೆಟ್ ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.  

ದಾಖಲೆಗಳ ಪರಿಶೀಲನಾ ವೇಳಾ ಪಟ್ಟಿಯನ್ನು ಆಯೋಗದ ಅಂತರ್ಜಾಲದಲ್ಲಿ ಪ್ರಕಟಿಸಲಾಗುವುದೇ ಎಂದು ಈ ಮೂಲಕ ತಿಳಿಸಲಾಗಿದೆ. 

* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ  ದಾಖಲೆಗಳ ಪರಿಶೀಲನೆಗೆ ಅರ್ಹತೆಪಡೆದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.