ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ ನಾಗರೀಕ (Civil) ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) 402 ಹುದ್ದೆಗಳ ನೇಮಕಾತಿಗಾಗಿ 2021 ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಹಾಗೂ ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಪೂರ್ಣಗೊಂಡಿದ್ದು, ಇಲಾಖೆಯು ಈ ಹುದ್ದೆಗಳಿಗೆ ದೈಹಿಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಪ್ರಸ್ತುತ ಈ ಹುದ್ದೆಗಳ ನೇಮಕಾತಿಯ ಮೊದಲ ಹಂತವಾದ ಲಿಖಿತ ಪರೀಕ್ಷೆಯನ್ನು ದಿನಾಂಕ 03 -ಅಕ್ಟೋಬರ್ -2024 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಪರೀಕ್ಷಾ ಪ್ರಾಧಿಕಾರವು ಅಧಿಕೃತ ಜಾಲತಾಣದಲ್ಲಿ ಸರಿ ಉತ್ತರಗಳನ್ನು ಪ್ರಕಟಿಸಿದೆ.
ಅಭ್ಯರ್ಥಿಗಳು ಅಧಿಕೃತ ಜಾಲತಾಣದಲ್ಲಿ (cetonline.karnataka.gov.in) ಕೀ ಉತ್ತರಗಳನ್ನು ಡೌನ್ಲೋಡ್ ಮಾಡಬಹುದು. ಪ್ರಕಟಿಸಲಾದ ಕೀ ಉತ್ತರಗಳ ಬಗ್ಗೆ ಯಾವುದೇ ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕ 06 ಅಕ್ಟೋಬರ್ 2024 ಸಂಜೆ 05:00 ಗಂಟೆಯೊಳಗಾಗಿ ವೆಬ್ ಸೆಟ್ ನಲ್ಲಿ ಒದಗಿಸಲಾದ ಆನ್ ಲೈನ್ ಲಿಂಕನ ಮೂಲಕ ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ. ಪ್ರತಿ ಪ್ರಶ್ನೆಗೆ ಆಕ್ಷೇಪಣೆಯನ್ನು ಸಲ್ಲಿಸಲು 100 ರೂ ಶುಲ್ಕವನ್ನು ವಿಧಿಸಲಾಗಿದೆ. ತಕ್ಷಣ ನಿಮ್ಮ ಉತ್ತರಗಳನ್ನು ಪರಿಶೀಲಿಸಿ!
ಕೀ ಉತ್ತರ ಡೌನ್ಲೋಡ್ ಮಾಡುವ ಹಂತಗಳು:
ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.
'PSI ನೇಮಕಾತಿ-2024' ಮೇಲೆ ಕ್ಲಿಕ್ ಮಾಡಿ.
'PSI-402 ನೇಮಕಾತಿ ಪರೀಕ್ಷೆಯ ಕೀ ಉತ್ತರ' ಲಿಂಕ್ ಮೂಲಕ ಪಿಡಿಎಫ್ ಡೌನ್ಲೋಡ್ ಮಾಡಬಹುದು.
ಅಭ್ಯರ್ಥಿಗಳು ತಮ್ಮ ಉತ್ತರಗಳನ್ನು ಈ ಕೀ ಉತ್ತರಗಳ ಜೊತೆಹೋಲಿಸಿ ಫಲಿತಾಂಶವನ್ನು ಪರಿಶೀಲಿಸಬಹುದು.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.
Comments