Karnataka Examination Authority
31 ಮೇ 2019
7 years ago
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ PWD ಇಲಾಖಾ ಹುದ್ದೆಗಳ ನೇಮಕಾತಿ ಪರೀಕ್ಷೆ ಮುಂದೂಡಿಕೆ ಮತ್ತು ಪರಿಷ್ಕೃತ ವೇಳಾಪಟ್ಟಿ ಪ್ರಕಟ
ಲೋಕೋಪಯೋಗಿ ಇಲಾಖೆಯಲ್ಲಿ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ 570 ಗ್ರೂಪ್ ಬಿ ದರ್ಜೆಯ ಸಹಾಯಕ ಎಂಜಿನಿಯರ್ ಗ್ರೇಡ್ 1 ಹುದ್ದೆಗಳಿಗೆ ಹಾಗೂ ಗ್ರೂಪ್ ಸಿ ದರ್ಜೆಯ 300 ಕಿರಿಯ ಇಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ದಿನಾಂಕ 10, 11, 12 ಜೂನ್ 2019 ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲು ದಿನಾಂಕ 14 ಜೂನ್ 2019 ರಂದು ಅಧಿಸೂಚನೆ ವೇಳಾಪಟ್ಟಿಯನ್ನೂ KEA ಪ್ರಕಟಿಸಿತ್ತು.
ಸದರಿ ದಿನಾಂಕಗಳಂದು ವಿಟಿಯು (VTU) ಪರೀಕ್ಷೆಗಳು ಹಾಗೂ ಇತರೆ ಪರೀಕ್ಷೆಗಳ ಪೂರ್ವ ನಿಗದಿಯಾಗಿರುವುದರಿಂದ ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕಗಳನ್ನು ಬದಲಾವಣೆ ಮಾಡಲು ಹಲವು ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಪರೀಕ್ಷೆಯ ವೇಳಾಪಟ್ಟಿಯನ್ನು ಮಾರ್ಪಡಿಸಲಾಗಿದೆ.
ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ಪರೀಕ್ಷೆಗಳು 22, 23, 24 ಜೂನ್ 2019 ರಂದು ನಡೆಯಲಿವೆ, ಸ್ಪರ್ಧಾತ್ಮಕ ಪರೀಕ್ಷೆಗೆ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳುವ ವಿವರಗಳನ್ನು ಸದ್ಯದಲ್ಲಿಯೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು.
ಪರಿಷ್ಕೃತ ವೇಳಾಪಟ್ಟಿಯಾ ಅಧಿಸೂಚನೆಯನ್ನು ಡೌನ್ಲೋಡ್ ಮಾಡಲು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ