Karnataka Examination Authority 07 ಜುಲೈ 2019 7 years ago

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ನೇಮಕಾತಿಯ ದಾಖಲೆಗಳ ಪರಿಶೀಲನೆಗೆ 1:2 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ನೇಮಕಾತಿಯ ದಾಖಲೆಗಳ ಪರಿಶೀಲನೆಗೆ 1:2 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿನ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗಳಿಗೆ, ಪ್ರಾಧಿಕಾರವು ದಿನಾಂಕ 29 /11 /2018 ರಿಂದ 08 / 12 / 2018ರ ವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿದ್ದು,ಅಭ್ಯರ್ಥಿಗಳ ಮಾಹಿತಿಗಾಗಿ ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಿ ಅಭ್ಯರ್ಥಿಗಳಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಅಭ್ಯರ್ಥಿಗಳಿಂದ ಸ್ವೀಕರಿಸಲಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ವರದಿಯನ್ನು ಆಧಾರಿಸಿ ಅಂತಿಮ ಕೀ ಉತ್ತರಗಳನ್ನು ಮತ್ತು ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳನ್ನು ದಿನಾಂಕ 23 / 03 / 2019 ರಂದು ಪ್ರಾಧಿಕಾರದ ಅಂತರ್ಜಾಲದಲ್ಲಿ ಪ್ರಕಟಿಸಲಾಗಿದೆ.ಪದವಿ ಪೂರ್ವ ಶಿಕ್ಷಣ ಇಲಾಖೆಯು ಉಪನ್ಯಾಸಕರ ಹುದ್ದೆಗಳ ವರ್ಗಿಕರಣದಂತೆ ಹಾಗೂ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳು ಮತ್ತು ಮೀಸಲಾತಿಗಳ ಆಧಾರದ ಮೇಲೆ 1:2 ಅನುಪಾತದಲ್ಲಿ ದಿನಾಂಕ 01 / 07 / 2019 ರಂದು ಮೂಲ ದಾಖಲೆಗಳ ಪರಿಶೀಲನಾ ಪಟ್ಟಿ ಪ್ರಕಟಿಸಿ ಅಭ್ಯರ್ಥಿಗಳಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು.ದಿನಾಂಕ 01/07/2019 ರಂದು ಪ್ರಕಟಿಸಿದ ಪಟ್ಟಿಗೆ ಸ್ವೀಕರಿಸಲಾದ ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದ್ದು 1:2 ಅನುಪಾತದಲ್ಲಿ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಪರಿಷ್ಕೃತ ವಿಷಯವಾರು ಅಭ್ಯರ್ಥಿಗಳ ಪಟ್ಟಿಯನ್ನು ಕೆಳಗೆ ನೀಡಲಾಗಿರುವ ಅಧಿಕೃತ ಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ನೋಡಿಕೊಳ್ಳಿ
Official Notifications & Links
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments