ಕರ್ನಾಟಕ ರಾಜ್ಯ ಸರಕಾರಿ ಹುದ್ದೆ ಆಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಸದ್ಯದಲ್ಲೇ ಸಿಹಿ ಸುದ್ದಿಯನ್ನು ನೀಡಲಿದೆ. KEAಯಿಂದ ಕೃಷಿ ಮಾರಾಟ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ವಾಯವ್ಯ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆಗಳಲ್ಲಿ 747 ಹುದ್ದೆಗಳ ಭರ್ತಿಗೆ ನೇಮಕಾತಿ ನಡೆಸಲು ಸರಕಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರವನ್ನು ಕೋರಿದ್ದು, ಅಂತಿಮ ಒಪ್ಪಿಗೆ ಸಿಕ್ಕಿದ ನಂತರ ಅಧಿಸೂಚನೆಯನ್ನು ಬಿಡುಗಡೆಗೊಳಿಸಿ ಅರ್ಜಿ ಆಹ್ವಾನಿಸಿ ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
Comments