Loading..!

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ(KEA) ಗ್ರಾಮ ಆಡಳಿತ ಅಧಿಕಾರಿ(VAO) ಹುದ್ದೆಗಳ ನೇಮಕಾತಿಯ ಅಂತಿಮ ಅಂಕಪಟ್ಟಿ ಇದೀಗ ಪ್ರಕಟ
Published by: Yallamma G | Date:12 ಡಿಸೆಂಬರ್ 2024
Image not found

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳ ನೇಮಕಾತಿಗಾಗಿ 20/02/2024 ರಂದು ಅಧಿಸೂಚನೆ ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳ ನೇಮಕಾತಿಯ ಮೊದಲ ಹಂತವಾದ ಕಡ್ಡಾಯ ಕನ್ನಡ ಲಿಖಿತ ಪರೀಕ್ಷೆಯನ್ನು ದಿನಾಂಕ 29 -ಸೆಪ್ಟೆಂಬರ್-2024 ಮತ್ತು 26.10.2024 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ಲಿಖಿತ ಪರೀಕ್ಷೆಯನ್ನು ನಡೆಸಿ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಪ್ರಕಟಿಸಲಾಗಿರುತ್ತದೆ ಹಾಗೂ ದಿನಾಂಕ 27.10.2024 ರಂದು ಪತ್ರಿಕೆ-1 ಮತ್ತು ಪತ್ರಿಕೆ-2ರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ, ಅಭ್ಯರ್ಥಿಗಳು ಗಳಿಸಿದ ತಾತ್ಕಾಲಿಕ ಅಂಕಪಟ್ಟಿಯನ್ನು ದಿನಾಂಕ 27.11.2024 ರಂದು ಪ್ರಕಟಿಸಿ ದಿನಾಂಕ 28.11.2024 ರ ವರೆಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು.


                 ನಿಗದಿತ ದಿನಾಂಕದವರೆಗೆ ಅಭ್ಯರ್ಥಿಗಳಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ. ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು 2021 (ತಿದ್ದುಪಡಿ) ರಲ್ಲಿ ನಿರ್ದೇಶಿಸಿರುವಂತೆ, ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕನಿಷ್ಟ 50 ಅಂಕಗಳು ಮತ್ತು ಪತ್ರಿಕೆ-1 ಮತ್ತು ಮತ್ತು ಪತ್ರಿಕೆ-2 ರಲ್ಲಿ ಶೇ. 35 ರಷ್ಟು ಅಂಕಗಳನ್ನು ಗಳಿಸಿ ಅರ್ಹರಾದ ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿಯನ್ನು ಮಾತ್ರ ಇದೀಗ KEA ಯು ಬಿಡುಗಡೆ ಮಾಡಲಾಗಿದೆ, ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ  


             ಸದರಿ ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿಯನ್ನು ಸಂಬಂಧಪಟ್ಟ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಲಾಗುವುದು, ಸಂಬಂಧಪಟ್ಟ ಜಿಲ್ಲಾಧಿಕಾರಿಯವರು ನಿಯಮಾನುಸಾರ ಆಯ್ಕೆ ಪಟ್ಟಿ ಪ್ರಕಟಿಸಲು ಪ್ರಕಟಿಸುತ್ತಾರೆ. 


 - ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಅಂತಿಮ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.

Comments