Loading..!

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ(KEA) ಗ್ರಾಮ ಆಡಳಿತ ಅಧಿಕಾರಿ(VAO) ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ
Published by: Yallamma G | Date:19 ಡಿಸೆಂಬರ್ 2024
Image not found

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳ ನೇಮಕಾತಿಗಾಗಿ 20/02/2024 ರಂದು ಅಧಿಸೂಚನೆ ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳ ನೇಮಕಾತಿಯ ಮೊದಲ ಹಂತವಾದ ಕಡ್ಡಾಯ ಕನ್ನಡ ಲಿಖಿತ ಪರೀಕ್ಷೆಯನ್ನು ದಿನಾಂಕ 29 -ಸೆಪ್ಟೆಂಬರ್-2024 ಮತ್ತು 26.10.2024 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ಲಿಖಿತ ಪರೀಕ್ಷೆಯನ್ನು ನಡೆಸಿ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಪ್ರಕಟಿಸಲಾಗಿರುತ್ತದೆ ಹಾಗೂ ದಿನಾಂಕ 27.10.2024 ರಂದು ಪತ್ರಿಕೆ-1 ಮತ್ತು ಪತ್ರಿಕೆ-2ರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ, ಅಭ್ಯರ್ಥಿಗಳು ಗಳಿಸಿದ ತಾತ್ಕಾಲಿಕ ಅಂಕಪಟ್ಟಿಯನ್ನು ದಿನಾಂಕ 27.11.2024 ರಂದು ಪ್ರಕಟಿಸಿ ದಿನಾಂಕ 28.11.2024 ರ ವರೆಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು.


            ಸದರಿ ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿಯನ್ನು ಪ್ರಕಟಿಸಿದ ಬೆನ್ನಲ್ಲೇ ಸರ್ಕಾರವು ಈ ನೇಮಕಾತಿ ಪ್ರಕ್ರಿಯೆಯನ್ನು ಅಂತಿಮಗೊಳಿಸಲು ವೇಳಾ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು 45933 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದು ಜಿಲ್ಲಾವಾರು ಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ವೇಳಾಪಟ್ಟಿಯನ್ವಯ ಅಭ್ಯರ್ಥಿಗಳ ದಾಖಲೆ ಪರಿಶೀಲನೆ, ಸಿಂಧುತ್ವ ಪ್ರಮಾಣ ಪತ್ರ, ಪೊಲೀಸ್ ವರದಿ, ಅಂಕಪಟ್ಟಿ ತಪಾಸಣೆ ನಡೆಸುವಂತೆ ಸೂಚಿಸಲಾಗಿದೆ.

VAO ಅಂತಿಮ  ಆಯ್ಕೆ ಪಟ್ಟಿ: 
- ಜ.2ರಿಂದ 10ರವರೆಗೆ: 1:3 ಅನುಪಾತ ದಲ್ಲಿನ ಅಭ್ಯರ್ಥಿಗಳ ಪರಿಶೀಲಿಸುವುದು. ಅಂಗವಿಕಲ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆ
- ಜ.15: ತಾತ್ಕಾಲಿಕ 1:1 ಹಾಗೂ ಹೆಚ್ಚುವರಿ ಪಟ್ಟಿ ಪ್ರಕಟಣೆ
- ಜ.16-23ರವರೆಗೆ: ತಾತ್ಕಾಲಿಕ ಹಾಗೂ ಹೆಚ್ಚುವರಿ ಪಟ್ಟಿಗೆ ಆಕ್ಷೇಪಣೆಗಳನ್ನು ಆಹ್ವಾನಿಸುವುದು
- ಜಿಲ್ಲಾಮಟ್ಟದಲ್ಲಿ ಜ.20-24 ರವರೆಗೆ 1:3 ಅನುಪಾತದಲ್ಲಿ ದಾಖಲೆ ಪರಿಶೀಲನೆಗಾಗಿ ಅರ್ಹತಾ ಪಟ್ಟಿ ಪ್ರಕಟಣೆ.
- ಜ.27: ಅಂತಿಮ ಆಯ್ಕೆ ಪಟ್ಟಿ ಹಾಗೂ ಹೆಚ್ಚುವರಿ ಪಟ್ಟಿ ಪ್ರಕಟಿಸಲಾಗುತ್ತದೆ.

Comments