ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಗ್ರಾಮ ಆಡಳಿತ ಅಧಿಕಾರಿ (VAO) ಮತ್ತು GTTC ಹುದ್ದೆಗಳ ನೇಮಕಾತಿಗಾಗಿ 20/02/2024 ರಂದು ಅಧಿಸೂಚನೆ ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳ ನೇಮಕಾತಿಯ ಮೊದಲ ಹಂತವಾದ ಕಡ್ಡಾಯ ಕನ್ನಡ ಲಿಖಿತ ಪರೀಕ್ಷೆಯನ್ನು ದಿನಾಂಕ 29 -ಸೆಪ್ಟೆಂಬರ್-2024 ರಂದು ರಾಜ್ಯದ 1,410 ಕೇಂದ್ರಗಳಲ್ಲಿ ಯಶಸ್ವಿಯಾಗಿ ಲಿಖಿತ ಪರೀಕ್ಷೆಯನ್ನು ನಡೆಸಿ ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಲಾಗಿತ್ತು.
ಗ್ರಾಮ ಆಡಳಿತ ಅಧಿಕಾರಿ ಮತ್ತು GTTC ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 17/09/2024 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಿ ಆದೇಶ ಹೊರಡಿಸಿ ಮತ್ತೆ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪುಸಿತ್ತು. ಇದೀಗ ವಯೋಮಿತಿ ಸಡಿಲಿಕೆ ಆದೇಶದ ನಂತರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ 26-10-2024 ರಂದು ಕಡ್ಡಾಯ ಕನ್ನಡ ಲಿಖಿತ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿ KEA ಯು ಇದೀಗ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ.
ಗ್ರಾಮ ಆಡಳಿತ ಅಧಿಕಾರಿ ಮತ್ತು GTTC ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ KEA ಯು ಇದೀಗ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರವನ್ನು ಕೂಡಾ ಬಿಡುಗಡೆ ಮಾಡಿದೆ. ಸ್ಪರ್ಧಾತ್ಮಕ ಪರೀಕ್ಷೆಯು ದಿನಾಂಕ27-10-2024 ರಂದು ನಡೆಯಲಿದ್ದು ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಪ್ರವೇಶ ಪತ್ರವನ್ನು Download ಮಾಡಿಕೊಳ್ಳಬಹುದಾಗಿದೆ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪ್ರವೇಶ ಪಾತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
Comments