ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ(KEA) ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಯ ಕೀ ಉತ್ತರಗಳು ಇದೀಗ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ(KEA) ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಯ ಕೀ ಉತ್ತರಗಳು ಇದೀಗ ಪ್ರಕಟ
Published by Yallamma G
30 ಅಕ್ಟೋಬರ್ 2024 Karnataka Examination Authority

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳ ನೇಮಕಾತಿಗಾಗಿ 20/02/2024 ರಂದು ಅಧಿಸೂಚನೆ ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳ ನೇಮಕಾತಿಯ ಮೊದಲ ಹಂತವಾದ ಕಡ್ಡಾಯ ಕನ್ನಡ ಲಿಖಿತ ಪರೀಕ್ಷೆಯನ್ನು ದಿನಾಂಕ 29 -ಸೆಪ್ಟೆಂಬರ್-2024 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಹುದ್ದೆಗಳ ನೇಮಕಾತಿಯ ಮುಂದಿನ ಹಂತವಾದ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ 27/10/2024 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ.

            ಅಭ್ಯರ್ಥಿಗಳು ಕೀ ಉತ್ತರಗಳನ್ನು ಜಾಲತಾಣದಲ್ಲಿ ಡೌನ್‌ಲೋಡ್ ಮಾಡಿಕೊಂಡು ಪರಿಶೀಲಿಸಬಹುದು. ಪ್ರಕಟಿಸಲಾದ ಕೀ ಉತ್ತರಗಳ ಬಗ್ಗೆ ಯಾವುದೇ ಆಕ್ಷೇಪಣೆಗಳನ್ನು ಸಲ್ಲಿಸಲು 04 ನವೆಂಬರ್ 2024 ಸಂಜೆ 05:00 ರೊಳಗಾಗಿ ವೆಬ್ ಸೆಟ್ ನಲ್ಲಿ ಒದಗಿಸಲಾದ ಆನ್ ಲೈನ್ ಲಿಂಕನ ಮೂಲಕ ಮಾತ್ರ ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ. ಪ್ರತಿ ಪ್ರಶ್ನೆಗೆ ಆಕ್ಷೇಪಣೆಯನ್ನು ಸಲ್ಲಿಸಲು ₹50 ಶುಲ್ಕ ವಿಧಿಸಲಾಗಿದೆ.

 - ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.