Loading..!

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ(KEA) ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಅರ್ಜಿ ಸಲ್ಲಿಕೆ ಮತ್ತೆ ಅವಕಾಶ | ಕೂಡಲೇ ಗಮನಿಸಿ
Published by: Basavaraj Halli | Date:18 ಸೆಪ್ಟೆಂಬರ್ 2024
Image not found

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಈಗಾಗಲೇ ಅಧಿಸೂಚಿಸಲಾಗಿರುವ ಗ್ರಾಮ ಆಡಳಿತ ಅಧಿಕಾರಿ, ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಸರ್ಕಾರಿ ಉಪಕರಣಾಗಾರ & ತರಬೇತಿ ಕೇಂದ್ರದಲ್ಲಿನ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ  ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಲಾಗಿರುತ್ತದೆ.  ಹಾಗಾಗಿ ವಯೋಮಿತಿ ಸಡಲಿಕೆ ಅನ್ವಯಿಸುವಂತಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. 
- ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳು ಮತ್ತು ಸರ್ಕಾರಿ ಉಪಕರಣಾಗಾರ & ತರಬೇತಿ ಕೇಂದ್ರದಲ್ಲಿನ ಹುದ್ದೆಗಳಿಗೆ ದಿನಾಂಕ 19 ಸೆಪ್ಟೆಂಬರ್ 2024 ರಿಂದ ಆರಂಭಗೊಂಡು ದಿನಾಂಕ 28 ಸೆಪ್ಟೆಂಬರ್ 2024ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿರುತ್ತದೆ.  ಹಾಗೆ ದಿನಾಂಕ 29 ಸೆಪ್ಟೆಂಬರ್ 2024ರ ವರೆಗೆ ಶುಲ್ಕವನ್ನು ಪಾವತಿಸಲು ಅವಕಾಶ ನೀಡಲಾಗಿದೆ.
- ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಹುದ್ದೆಗಳಿಗೆ ದಿನಾಂಕ 18 ಸೆಪ್ಟೆಂಬರ್ 2024 ರಿಂದ ಆರಂಭಗೊಂಡು ದಿನಾಂಕ 03 ಅಕ್ಟೋಬರ್ 2024ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಅವಕಾಶ ನೀಡಲಾಗಿದ್ದು, ಸದರಿ ವಯೋಮಿತಿಗೆ ಒಳಪಡುವ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕದೊಳಗಾಗಿ ಅರ್ಜಿಗಳನ್ನು ಸಲ್ಲಿಸಿ, ಈ ಒಂದು ಅವಕಾಶವನ್ನು ಪಡೆಯಬಹುದಾಗಿರುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತನ್ನ ಪ್ರಕಟಣೆಯಲ್ಲಿ ತಿಳಿಸಿರುತ್ತದೆ.

Comments

Renukaprasad ಸೆಪ್ಟೆ. 17, 2024, 8:06 ಅಪರಾಹ್ನ
Shruti Kulkarni ಸೆಪ್ಟೆ. 18, 2024, 7:04 ಪೂರ್ವಾಹ್ನ