KPSCಯಿಂದ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ & ಲೆಕ್ಕಪತ್ರ ಇಲಾಖೆಯಲ್ಲಿನ ವಿವಿಧ ಹುದ್ದೆಗಳ ಮುಖ್ಯ ಪರೀಕ್ಷಾ ಪ್ರವೇಶ ಪತ್ರಗಳು ಇದೀಗ ಪ್ರಕಟ

KPSCಯಿಂದ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ & ಲೆಕ್ಕಪತ್ರ ಇಲಾಖೆಯಲ್ಲಿನ ವಿವಿಧ ಹುದ್ದೆಗಳ ಮುಖ್ಯ ಪರೀಕ್ಷಾ ಪ್ರವೇಶ ಪತ್ರಗಳು ಇದೀಗ ಪ್ರಕಟ
Published by Yallamma G
16 ಏಪ್ರಿಲ್ 2025 KPSC

ಕರ್ನಾಟಕ ಲೋಕಸೇವಾ ಆಯೋಗ (KPSC) ವು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಗ್ರೂಪ್-ಎ  ವೃಂದದ ಸಹಾಯಕ ನಿಯಂತ್ರಕರು ( Assistant Controller ) 43 ಮತ್ತು  ಗ್ರೂಪ್-ಬಿ ವೃಂದದ ಲೆಕ್ಕ ಪರಿಶೋಧನಾಧಿಕಾರಿ 54 (ಉಳಿಕೆ ಮೂಲ ವೃಂದ) ಹುದ್ದೆಗಳ ನೇಮಕಾತಿಗಾಗಿ ದಿನಾಂಕ: 19-11-2024 ರಂದು ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.  

        ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 22-04-2025, 23-04-2025, 24-04-2025 & 25-04-2025 ವರೆಗೆ ಮುಖ್ಯ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಸದರಿ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಇದೀಗ ಕರ್ನಾಟಕ ಲೋಕಸೇವಾ ಆಯೋಗವು ತನ್ನ ಇಲಾಖಾ ಜಾಲತಾಣದಲ್ಲಿ ಬಿಡುಗಡೆಮಾಡಿದೆ. ದಿನಾಂಕ: 15-04-2025 ರಿಂದ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. 

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.