ಕರ್ನಾಟಕ ಲೋಕಸೇವಾ ಆಯೋಗ(KPSC)ದ ವಿವಿಧ ಇಲಾಖೆಗಳ ವಿವಿಧ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಇದೀಗ ಪ್ರಕಟಿಸಿದೆ. ಕಿರಿಯ ಸಹಾಯಕರು/ ದ್ವಿತೀಯ ದರ್ಜೆ ಸಹಾಯಕರು ಉಳಿಕೆ ಮೂಲವೃಂದದ 1122 ಕಿರಿಯ ಸಹಾಯಕರು ಹಾಗೂ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಕಳೆದ ವರ್ಷದ ಜನವರಿಯಲ್ಲಿ ಅಂತಿಮ ಆಯ್ಕೆಪಟ್ಟಿಯನ್ನು ಹೊರಡಿಸಿತ್ತು. ಇದೀಗ 16 ಇಲಾಖೆಗಳಿಂದ ಪ್ರಸ್ತಾವನೆ ಸ್ವೀಕೃತವಾದ ಕಾರಣ ಮತ್ತೆ 79 ಅಭ್ಯರ್ಥಿಗಳ ಹೆಚ್ಚುವರಿ ಪಟ್ಟಿಯನ್ನು ಪ್ರಕಟಿಸಿದೆ.
- ಉಳಿಕೆ ಮೂಲ ವೃಂದದ 59 ಅಬಕಾರಿ ಉಪ ನಿರೀಕ್ಷಕರ ಹುದ್ದೆಗಳಿಗೆ ಅಂತಿಮ ಪಟ್ಟಿ ನೀಡಲಾಗಿತ್ತು. ಬಳಿಕ 2023ರ ಮಾರ್ಚ್‌ನಲ್ಲಿ ಹೆಚ್ಚುವರಿ ಪಟ್ಟಿಯನ್ನು ನೀಡಲಾಗಿತ್ತು.ಇದೀಗ ಒಟ್ಟು 34 ಅಭ್ಯರ್ಥಿಗಳ ಹೆಚ್ಚುವರಿ ಪಟ್ಟಿಯನ್ನು ಮರುಪ್ರಕಟಿಸಲಾಗಿದೆ ಎಂದು ಕೆಪಿಎಸ್‌ಸಿ ತಿಳಿಸಿದೆ.
- ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯ ವಿವಿಧ ಶಾಲೆಗಳಿಗಾಗಿ 239 ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಭ್ಯರ್ಥಿಗಳ ಸ್ವಇಚ್ಛಾ ಹೇಳಿಕೆಯನ್ನು ಆಧರಿಸಿ 106 ಅಭ್ಯರ್ಥಿಗಳ ಪರಿಷ್ಕೃತ ಹೆಚ್ಚುವರಿ ಪಟ್ಟಿಯನ್ನು ಪ್ರಕಟಿಸಲಾಗಿದೆ.
- ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದಲ್ಲಿನ ವಸತಿ ಶಾಲೆಗಳಿಗೆ ಸಾಮಾನ್ಯ ವಿಜ್ಞಾನ ಶಿಕ್ಷಕರ ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಇದೀಗ KPSC ಯು ಪ್ರಕಟಿಸಲಾಗಿದೆ.
Comments