KPSCಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ಸಹಾಯಕ ಇಂಜಿನಿಯರ್ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರಗಳು ಇದೀಗ ಪ್ರಕಟ

KPSCಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ಸಹಾಯಕ ಇಂಜಿನಿಯರ್ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರಗಳು ಇದೀಗ ಪ್ರಕಟ
Published by Bhagya R K
27 ಜನವರಿ 2025 KPSC

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 20-09-2024 ರಂದು ಅಧಿಸೂಚಿಸಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ (BBMP) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. 

     ಅಧಿಸೂಚನೆಯ ಪ್ರಕಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ 2025 ಜನವರಿ 31 ರಂದು ಮತ್ತು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ ಸಹಾಯಕ ನಿರ್ದೇಶಕ ಹುದ್ದೆಗಳಿಗೆ 2025 ಫೆಬ್ರವರಿ 2 ರಂದು ಪರೀಕ್ಷೆಗಳನ್ನು ನಡೆಸಲಾಗುವುದು.

ಪ್ರಮುಖ ದಿನಾಂಕಗಳು:
ಸಹಾಯಕ ಇಂಜಿನಿಯರ್ (ಸಿವಿಲ್) ಪರೀಕ್ಷೆ: 31-01-2025
ಸಹಾಯಕ ನಿರ್ದೇಶಕ (AD) ಪರೀಕ್ಷೆ: 02-02-2025
ಪ್ರವೇಶ ಪತ್ರ ಡೌನ್‌ಲೋಡ್ ಪ್ರಾರಂಭ ದಿನಾಂಕ: 24-01-2025

ಪ್ರವೇಶ ಪತ್ರದ ವಿವರಗಳು : 
ಈ ಪರೀಕ್ಷೆಗಳ ಪ್ರವೇಶ ಪತ್ರ (Hall Ticket) ಅನ್ನು 2025 ಜನವರಿ 24ರಿಂದ ಆಯೋಗದ ಅಧಿಕೃತ ವೆಬ್‌ಸೈಟ್‌ (kpsc.kar.nic.in) ಮೂಲಕ ಡೌನ್‌ಲೋಡ್ ಮಾಡಬಹುದಾಗಿದೆ.

ಅಭ್ಯರ್ಥಿಗಳಿಗೆ ಸೂಚನೆ :
- ಪರೀಕ್ಷಾ ಸ್ಥಳ, ಸಮಯ ಹಾಗೂ ಬೆಳವಣಿಗೆಯ ಕುರಿತು ಮಾಹಿತಿಯನ್ನು ಪ್ರವೇಶ ಪತ್ರದಲ್ಲಿ ನೀಡಲಾಗುವುದು.  
- ಪ್ರವೇಶ ಪತ್ರ ಮತ್ತು ಮಾನ್ಯ ಗುರುತಿನ ಚೀಟಿಯನ್ನು ಪರೀಕ್ಷಾ ದಿನಕ್ಕೆ ತರುವುದು ಕಡ್ಡಾಯ.  
- ಯಾವುದೇ ಪ್ರಶ್ನೆಗಳಿಗಾಗಿ ಆಯೋಗದ ವೆಬ್‌ಸೈಟ್ ಸಂಪರ್ಕಿಸಬಹುದು.  

* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪ್ರವೇಶ ಪಾತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.