Loading..!

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ವಿವಿಧ ಹುದ್ದೆಗಳ ನೇಮಕಾತಿಗಳಿಗೆ ಸಂಬಂಧಿಸಿದಂತೆ ನಡೆಸುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯ ಫಲಿತಾಂಶವನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ
| Date:15 ಜುಲೈ 2019
Image not found
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ವಿವಿಧ ಹುದ್ದೆಗಳ ನೇಮಕಾತಿಗಳಿಗೆ ಸಂಬಂಧಿಸಿದಂತೆ ನಡೆಸುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯ ಫಲಿತಾಂಶವನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಅಭ್ಯರ್ಥಿಗಳು ಶೈಕ್ಷಣಿಕ ವರ್ಷಗಳಲ್ಲಿ ಕನ್ನಡ ಭಾಷಾ ವಿಷಯವನ್ನು ಅಭ್ಯಸಿಸದೆ ಇದ್ದಲ್ಲಿ ಅಂತಹ ಅಭ್ಯರ್ಥಿಗಳು ಕಡ್ಡಾಯವಾಗಿ ಈ ಪರೀಕ್ಷೆಯನ್ನು ಪಾಸಾಗಿ ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದ ವಿವಿಧ ನೇಮಕಾತಿಗಳಿಗೆ ಅರ್ಹತೆಯನ್ನು ಪಡೆಯಬೇಕಾಗುತ್ತದೆ. ಈ ಪರೀಕ್ಷೆ ಬರೆದ ಅಭ್ಯರ್ಥಿಗಳು ಆಯೋಗದ ಫಲಿತಾಂಶ ವಿಭಾಗದಲ್ಲಿ ತಾವು ಅರ್ಹತೆ ಪಡೆ ಪಡೆದಿದ್ದೇನೆಯೇ ಇಲ್ಲವೇ ಎಂದು ಪರಿಶೀಲಿಸಿ ಕೊಳ್ಳಬಹುದಾಗಿದ್ದು ಅರ್ಹತೆ ಪಡೆದ ಅಭ್ಯರ್ಥಿಗಳ ರಿಜಿಸ್ಟರ್ ನಂಬರಗಳನ್ನು ಆಯೋಗವು ಪ್ರಕಟಿಸಿದೆ

ಈ ಪರೀಕ್ಷೆಗಳು 2018 ರ ಸೆಪ್ಟೆಂಬರ್ 22, ಅಕ್ಟೋಬರ್ 5 ಮತ್ತು ಡಿಸೆಂಬರ್ 15ರಂದು ನಡೆಸಲಾಗಿತ್ತು. ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆ ಪಡೆದವರನ್ನು ಮಾತ್ರ ನೇಮಕಾತಿಯಲ್ಲಿ ಪರಿಗಣಿಸಲಾಗುತ್ತದೆ ಎಂದು ಆಯೋಗವು ತಿಳಿಸಿದೆ. ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments