ಕರ್ನಾಟಕ ಲೋಕಸೇವಾ ಆಯೋಗವು 2024-25 ನೇ ಸಾಲಿನ ವಿವಿಧ ಉಳಿಕೆ ಮೂಲ ವೃಂದ ಹಾಗೂ ಹೈದರಾಬಾದ್ ಕರ್ನಾಟಕ ವೃಂದದ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಪಟ್ಟ ತಾತ್ಕಾಲಿಕ ವೇಳಾಪಟ್ಟಿಯನ್ನು ಇದೀಗ ಪ್ರಕಟಿಸಿದೆ. ಈ ಪ್ರಕಾರ 2025ರ ಜನವರಿಯಿಂದ ಏಪ್ರಿಲ್‌ವರೆಗೆ ವಿವಿಧ ಹುದ್ದೆಗಳ ನೇಮಕಾತಿ ಭರ್ತಿಗೆ ಪರೀಕ್ಷಾ ಪ್ರಕ್ರಿಯೆ ನಡೆಯಲಿದೆ.
ಇದೀಗ KPSC ಯು ವಿವಿಧ ಹುದ್ದೆಗಳ ಪರೀಕ್ಷೆಯ ದಿನಾಂಕವನ್ನು ನಿಗದಿಪಡಿಸಿದೆ. ಕರ್ನಾಟಕ ಲೋಕಸೇವಾ ಆಯೋಗದಿಂದ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯಲ್ಲಿನ ಸಹಾಯಕ ನಿಯಂತ್ರಕರು ಮತ್ತು ಲೆಕ್ಕ ಪರಿಶೋಧನಾಧಿಕಾರಿ, ಗ್ರೂಪ್ ಸಿ (313) ಹುದ್ದೆಗಳು, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಪಶುವೈದ್ಯಾಧಿಕಾರಿಗಳ (400) ಹುದ್ದೆಗಳು, ಬಿಬಿಎಂಪಿ ಸಹಾಯಕ ಇಂಜಿನಿಯರ್ (ಸಿವಿಲ್), ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕ/ ಕಲ್ಯಾಣಾಧಿಕಾರಿಗಳು ಸೇರಿದಂತೆ ವಿವಿಧ ನೇಮಕಾತಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಇದೀಗ KPSC ಇಲಾಖೆಯು ಪ್ರಕಟಿಸಿದೆ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯ ಮೂಲಕ ಪರೀಕ್ಷಾ ವೇಳಾಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Comments