KPSCಯಿಂದ ವಿವಿಧ ಇಲಾಖೆಗಳಲ್ಲಿನ ಗ್ರೂಪ್ - C ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರಗಳು ಇದೀಗ ಪ್ರಕಟ | ಈ ಕುರಿತು ಮಾಹಿತಿ ನಿಮಗಾಗಿ
Published by: Bhagya R K | Date:13 ಮಾರ್ಚ್ 2025
Image not found

ಕರ್ನಾಟಕ ಲೋಕಸೇವಾ ಆಯೋಗ (KPSC) ವು ಪದವಿ ಪೂರ್ವ ವಿದ್ಯಾರ್ಹತೆ ಮಟ್ಟದ ವಿವಿಧ ಇಲಾಖೆಗಳಲ್ಲಿನ (ಉಳಿಕೆ ಮೂಲ ವೃಂದ) ಗ್ರೂಪ್ 'ಸಿ' ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಿದ್ದು, ಸದರಿ ಹುದ್ದೆಗಳ ಪರೀಕ್ಷೆಗೆ ಪ್ರವೇಶ ಪತ್ರವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ.


           ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 16 ಮಾರ್ಚ್ 2025 ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಸದರಿ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಇದೀಗ ಕರ್ನಾಟಕ ಲೋಕಸೇವಾ ಆಯೋಗವು ತನ್ನ ಇಲಾಖಾ ಜಾಲತಾಣದಲ್ಲಿ ಬಿಡುಗಡೆಮಾಡಿದೆ. ದಿನಾಂಕ: 07-03-2025 ರಿಂದ ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಆಯೋಗದ ವೆಬ್ ಸೈಟ್ http://kpsc.kar.nic.in ರ ಮೂಲಕ ಡೌನ್ ಮಾಡಿಕೊಳ್ಳಬಹುದು.


ಪರೀಕ್ಷೆಯ ದಿನಾಂಕ :
ಸ್ಪರ್ಧಾತ್ಮಕ ಪರೀಕ್ಷೆ 16-03-2025 ರಂದು ನಡೆಯಲಿದೆ.  


ಪ್ರವೇಶ ಪತ್ರ ಡೌನ್‌ಲೋಡ್ :
ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಆಯೋಗದ ಅಧಿಕೃತ ವೆಬ್‌ಸೈಟ್ [http://kpsc.kar.nic.in](http://kpsc.kar.nic.in) ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.  


ಪರೀಕ್ಷಾ ವೇಳಾಪಟ್ಟಿ : 
ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿ ಆಯೋಗದ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಅಭ್ಯರ್ಥಿಗಳು ತಮ್ಮ ವೇಳಾಪಟ್ಟಿಯನ್ನು ಪರಿಶೀಲಿಸಿ, ಸೂಕ್ತವಾಗಿ ತಯಾರಾಗುವುದು ಅಗತ್ಯ.  


ವಿಶೇಷ ಸೂಚನೆ :
ಅಂಗವಿಕಲ (ದಿವ್ಯಾಂಗ) ಅಭ್ಯರ್ಥಿಗಳು ತಮ್ಮದೇ ಆದ ಲಿಪಿಕಾರರನ್ನು ಕರೆತರುವ ಸಂದರ್ಭದಲ್ಲಿ, ತಮ್ಮ ಪ್ರವೇಶ ಪತ್ರದೊಂದಿಗೆ ಲಿಪಿಕಾರರ ಪ್ರವೇಶ ಪತ್ರವನ್ನು ಸಹ ಡೌನ್‌ಲೋಡ್ ಮಾಡಿಕೊಳ್ಳಬೇಕು.  


ಅಭ್ಯರ್ಥಿಗಳಿಗೆ ಶುಭಾಶಯಗಳು! ಸಕಾಲದಲ್ಲಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಿ ಮತ್ತು ಪರೀಕ್ಷೆಗೆ ಪೂರ್ಣ ಸಿದ್ಧತೆಯೊಂದಿಗೆ ಹಾಜರಾಗಿರಿ.  


ಈ ರೀತಿಯ ಮತ್ತಷ್ಟು ಮಾಹಿತಿಗಾಗಿ KPSC ವೆಬ್‌ಸೈಟ್‌ಗೆ ಭೇಟಿ ನೀಡಲು ಮರೆಯಬೇಡಿ!

Comments