ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಗ್ರೂಪ್ ಸಿ ಹುದ್ದೆಗಳ ಪ್ರಮುಖ ದಿನಾಂಕದ ಮಾಹಿತಿ ನಿಮಗಾಗಿ

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಗ್ರೂಪ್ ಸಿ ಹುದ್ದೆಗಳ ಪ್ರಮುಖ ದಿನಾಂಕದ ಮಾಹಿತಿ ನಿಮಗಾಗಿ
Published by Savita Halli
31 ಆಗಸ್ಟ್ 2022 KPSC

ಕರ್ನಾಟಕ ಲೋಕ ಸೇವಾ ಆಯೋಗವು ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಹೈದರಾಬಾದ್ ಕರ್ನಾಟಕ ವೃಂದದ ಸಹಾಯಕ ಸಾಂಖ್ಯಿಕ ಅಧಿಕಾರಿ -05 ಗ್ರೂಪ್ " ಸಿ " ಹುದ್ದೆಗಳನ್ನು ಆಯ್ಕೆ ಮಾಡಲು ಆನ್‌ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿತ್ತು,
ಈ ಹುದ್ದೆಗಳಿಗೆ ದಿನಾಂಕ: 26.07.2022 ರಂದು ಅಧಿಸೂಚನೆಯನ್ನು ಹೊರಡಿಸಲಾಗಿತ್ತು . ಸದರಿ ಅಧಿಸೂಚನೆಗೆ ಅನುಗುಣವಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.08,2022 ಮತ್ತು ಶುಲ್ಕ ಪಾವತಿಸಲು ದಿನಾಂಕ : 31.08.2022 ರಂದು ನಿಗದಿಪಡಿಸಲಾಗಿತ್ತು. ಪ್ರಸ್ತುತ ಈ  ಹುದ್ದೆಗಳ ವಿದ್ಯಾರ್ಹತೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಂದ ಹಲವು ಮನವಿಗಳು ಸ್ವೀಕೃತವಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ದಿ : 26.07.2022 ರ ಅಧಿಸೂಚನೆಗೆ Master Degree ಹೊಂದಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕವನ್ನು ದಿ ; 30.08.2022 ರಿಂದ 13.09.2022 ರವರೆಗೆ ಮತ್ತು ಶುಲ್ಕ ಪಾವತಿಸಲು ದಿ : 31.08.2022 ರಿಂದ 14,09,2022 ರವರೆಗೆ ವಿಸ್ತರಿಸಿದೆ.
* ಈ ಕುರಿತು ಇನ್ನು ಹೆಚ್ಚಿನ ಸವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ

Useful Links
To Visit Official Announcement
Official notification attachment
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.