ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 28 ಫೆಬ್ರವರಿ 2021ರಂದು ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಸಹಾಯಕರು / ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು, ಹಾಗೂ ಈ ಲಿಖಿತ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಿ ಅಭ್ಯರ್ಥಿಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು.
ಅಂತೆಯೇ ಅಭ್ಯರ್ಥಿಗಳು ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಗಣಿಸಿ ಸದರಿ ಸಮಿತಿಯು ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ದಿನಾಂಕ 8 ಏಪ್ರಿಲ್ ಇಪ್ಪತ್ತೊಂದರಂದು ಪ್ರಕಟಿಸಿಲಾಗಿತ್ತು.
ಈ ಅಂತಿಮ ಕೀ ಉತ್ತರಗಳಲ್ಲಿ ಹಲವು ದೋಷಗಳ ಕುರಿತು ಅಭ್ಯರ್ಥಿಗಳು ಹಾಗೂ ಮಾಧ್ಯಮದವರು ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ KPSC ನೇಮಕಾತಿ ನಿಯಮಗಳ ಪ್ರಕಾರ ಅಂತಿಮ ಕೀ ಉತ್ತರಗಳಿಗೆ ಮತ್ತೊಮ್ಮೆ ಆಕ್ಷೇಪಣೆ ಸಲ್ಲಿಸಲು ಯಾವುದೇ ರೀತಿಯ ಅವಕಾಶವಿರುವುದಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗವು ಇದೀಗ ಸ್ಪಷ್ಟೀಕರಣ ನೀಡಿ, ಜಾಲತಾಣದಲ್ಲಿ ಪ್ರಕಟಣೆಯನ್ನು ಹೊರಡಿಸಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಪ್ರಕಟನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
Comments