ಕರ್ನಾಟಕ ಲೋಕಸೇವಾ ಆಯೋಗ (KPSC)ದಿಂದ ಫೆಬ್ರುವರಿ ನಿಂದ ಏಪ್ರಿಲ್ ವರೆಗಿನ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ | ಈ ಕುರಿತು ಮಾಹಿತಿ ನಿಮಗಾಗಿ

ಕರ್ನಾಟಕ ಲೋಕಸೇವಾ ಆಯೋಗ (KPSC)ದಿಂದ ಫೆಬ್ರುವರಿ ನಿಂದ ಏಪ್ರಿಲ್ ವರೆಗಿನ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ | ಈ ಕುರಿತು ಮಾಹಿತಿ ನಿಮಗಾಗಿ
Published by Bhagya R K
30 ಜನವರಿ 2025 KPSC

ಕರ್ನಾಟಕ ಲೋಕಸೇವಾ ಆಯೋಗವು (KPSC) 2025ರ ಜನವರಿ 29ರಂದು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ವಿವಿಧ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅದರಂತೆ, ಮುಂಬರುವ ಫೆಬ್ರುವರಿ, ಮಾರ್ಚ್ ಮತ್ತು ಏಪ್ರಿಲ್ ತಿಂಗಳ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ವೇಳಾಪಟ್ಟಿಯು ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗಳ ದಿನಾಂಕಗಳು ಮತ್ತು ಸಮಯಗಳನ್ನು ಒಳಗೊಂಡಿದೆ. ವಿವಿಧ ಇಲಾಖೆಗಳ ಹುದ್ದೆಗಳ ಭರ್ತಿಗೆ ಈ ಪರೀಕ್ಷೆಗಳು ನಡೆಯಲಿವೆ.

 ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿನ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಲ ಸಂಪನ್ಮೂಲ ಇಲಾಖೆ, ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ, ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ, ಲೋಕೋಪಯೋಗಿ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಹುದ್ದೆಗಳಿಗಾಗಿ ನಿರ್ದಿಷ್ಟ ಪತ್ರಿಕೆ-2 ಪರೀಕ್ಷೆಯ ದಿನಾಂಕವನ್ನು ಸರ್ಕಾರ ಪ್ರಕಟಿಸಿದೆ.

ಪರೀಕ್ಷೆಗಳು ನಡೆಯುವ ಪ್ರಮುಖ ಇಲಾಖೆಗಳು:

    • ಜಲಸಂಪನ್ಮೂಲ ಇಲಾಖೆ
    • ಭೂಮಾಪನ ಮತ್ತು ಕಂದಾಯ ಇಲಾಖೆ
    • ಕಾರ್ಖಾನೆಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ
    • ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)
    • ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
    • ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ
    • ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ

      ಪ್ರಮುಖ ಪರೀಕ್ಷೆಗಳು:
    • ಫೆಬ್ರುವರಿ 2025:

      • ಸಹಾಯಕ ಇಂಜಿನಿಯರ್ (ಮೆಕ್ಯಾನಿಕಲ್/ಸಿವಿಲ್)
      • ಭೂ ದಾಖಲೆಗಳ ಸಹಾಯಕ ನಿರ್ದೇಶಕರು
      • ಕಾರ್ಖಾನೆಗಳ ಸಹಾಯಕ ನಿರ್ದೇಶಕರು
      • ಭೂ ವಿಜ್ಞಾನಿ (ಅಂತರ್ಜಲ ನಿರ್ದೇಶನಾಲಯ)
    • ಮಾರ್ಚ್ 2025:

      • ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ
      • ಸಹಾಯಕ ಇಂಜಿನಿಯರ್ (BBMP)
      • ಪದವಿ ಪೂರ್ವ ವಿದ್ಯಾರ್ಹತೆ ಗ್ರೂಪ್‌ ಸಿ ಹುದ್ದೆಗಳು (313 ಹುದ್ದೆಗಳು)
      • ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಮುಖ್ಯ ಪರೀಕ್ಷೆ
    • ಏಪ್ರಿಲ್ 2025:

      • ಪಶುವೈದ್ಯಾಧಿಕಾರಿ ಹುದ್ದೆಗಳ ಪರೀಕ್ಷೆ
      • ರಾಜ್ಯ ಲೆಕ್ಕಪರಿಶೋಧನಾ ಇಲಾಖೆಯ ಸಹಾಯಕ ನಿಯಂತ್ರಕರು ಮತ್ತು ಲೆಕ್ಕಪರಿಶೋಧನಾಧಿಕಾರಿ ಹುದ್ದೆಗಳ ಮುಖ್ಯ ಪರೀಕ್ಷೆ

ಅಭ್ಯರ್ಥಿಗಳು ತಮ್ಮ ಪರೀಕ್ಷೆಗಳ ವೇಳೆಯನ್ನು ಪರಿಶೀಲಿಸಲು kpsc.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಅಧಿಕೃತ ಪ್ರಕಟಣೆ ಮತ್ತು ಹೆಚ್ಚಿನ ಮಾಹಿತಿಗಾಗಿ, ಅಭ್ಯರ್ಥಿಗಳು KPSC ವೆಬ್‌ಸೈಟ್‌ನಲ್ಲಿ ಲಭ್ಯವಿರುವ PDF ಅನ್ನು ಡೌನ್‌ಲೋಡ್ ಮಾಡಬಹುದು.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.