KPSC ಯಿಂದ ಕಿರಿಯ ಲೆಕ್ಕ ಸಹಾಯಕರು ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಇದೀಗ ಪ್ರಕಟ | ಈ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ

KPSC ಯಿಂದ ಕಿರಿಯ ಲೆಕ್ಕ ಸಹಾಯಕರು ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಇದೀಗ ಪ್ರಕಟ | ಈ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ
Published by Yallamma G
19 ಜೂನ್ 2025 KPSC

                          ಕರ್ನಾಟಕ ಲೋಕಸೇವಾ ಆಯೋಗ (KPSC)ದಿಂದ 15-03-2023ರಲ್ಲಿ ಅಧಿಸೂಚಿಸಲಾದ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಕಿರಿಯ ಲೆಕ್ಕ ಸಹಾಯಕರ ಉಳಿಕೆ ಮೂಲ ವೃಂದದ 67 ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಗಿತ್ತು. ಕಾಲಕಾಲಕ್ಕೆ ತಿದ್ದು ಪಡಿಯಾದ ಕರ್ನಾಟಕ ನಾಗರೀಕ ಸೇವೆಗಳು (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ರ ನಿಯಮಗಳು ಹಾಗೂ ತಿದ್ದುಪಡಿ ನಿಯಮ 2022ರ ಅನ್ವಯ ದಿನಾಂಕ: 10-02-2025 ರಂದು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿತ್ತು.

                  ಈ ತಾತ್ಕಾಲಿಕ ಆಯ್ಕೆಪಟ್ಟಿಗೆ ಸಂಬಂಧಿಸಿದಂತೆ ಏನಾದರು ಆಕ್ಷೇಪಣೆಗಳಿದ್ದರೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಗೊಂಡ ದಿನದಿಂದ 07 ದಿನಗಳ ಒಳಗಾಗಿ ಆಕ್ಷೇಪಣೆಗಳನ್ನು ಸಲ್ಲಿಸಲು ಕಾಲಾವಕಾಶವನ್ನು ನೀಡಲಾಗಿತ್ತು. ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಇದೀಗ ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಕರ್ನಾಟಕ ಲೋಕಸೇವಾ ಆಯೋಗವು ತನ್ನ ಇಲಾಖಾ ಜಾಲತಾಣದಲ್ಲಿ ಪ್ರಕಟಿಸಿದೆ. 

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.