Loading..!

KPSC ಯಿಂದ ಲೆಕ್ಕ ಸಹಾಯಕ ಮತ್ತು ಸಹಕಾರ ಸಂಘಗಳ ನಿರೀಕ್ಷಕರ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಇದೀಗ ಪ್ರಕಟ | ಈ ಕುರಿತು ಮಾಹಿತಿ ನಿಮಗಾಗಿ
Published by: Bhagya R K | Date:11 ಫೆಬ್ರುವರಿ 2025
Image not found

ಕರ್ನಾಟಕ ಲೋಕಸೇವಾ ಆಯೋಗ (KPSC)ವು ವಿವಿಧ ಇಲಾಖೆಯ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಗಳನ್ನು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ. ಈ ಆಯ್ಕೆಪಟ್ಟಿಗಳು 2024ರ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆಗೊಂಡಿದ್ದು, ಆಕ್ಷೇಪಣೆಗಳ ಪರಿಶೀಲನೆಯ ನಂತರ ಅಂತಿಮ ಪಟ್ಟಿ ಪ್ರಕಟವಾಗಿದೆ.


ಲೆಕ್ಕ ಸಹಾಯಕ ಹುದ್ದೆಗಳ ನೇಮಕಾತಿ :
                           
                              ಕರ್ನಾಟಕ ಲೋಕಸೇವಾ ಆಯೋಗವು (KPSC) 14-03-2023 ರಂದು ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ & ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕರು 242 (ಉಳಿಕೆ ಮೂಲ ವೃಂದದ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 26-09-2024 ರಂದು ಅಂತಿಮ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು, ಸದರಿ ಆಯ್ಕೆಪಟ್ಟಿಯ ಆಕ್ಷೇಪಣೆಗಳನ್ನು ಸಲ್ಲಿಸಲು 7 ದಿನಗಳ ಕಾಲಾವಕಾಶವನ್ನು ನೀಡಲಾಗಿತ್ತು. ಇದೀಗ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಆಯ್ಕೆಪಟ್ಟಿಯನ್ನು KPSC ಯು ಇದೀಗ ತನ್ನ ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. 


ಸಹಕಾರ ಸಂಘಗಳ ನಿರೀಕ್ಷಕರ ನೇಮಕಾತಿ :

                                     ಕರ್ನಾಟಕ ಲೋಕಸೇವಾ ಆಯೋಗವು (KPSC) 17-03-2023 ರಂದು ಸಹಕಾರ ಇಲಾಖೆಯಲ್ಲಿನ ಸಹಕಾರ ಸಂಘಗಳ ನಿರೀಕ್ಷಕರು 47 (ಉಳಿಕೆ ಮೂಲ ವೃಂದದ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 26-09-2024 ರಂದು ಅಂತಿಮ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು, ಸದರಿ ಆಯ್ಕೆಪಟ್ಟಿಯ ಆಕ್ಷೇಪಣೆಗಳನ್ನು ಸಲ್ಲಿಸಲು 7 ದಿನಗಳ ಕಾಲಾವಕಾಶವನ್ನು ನೀಡಲಾಗಿತ್ತು. ಇದೀಗ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಆಯ್ಕೆಪಟ್ಟಿಯನ್ನು KPSC ಯು ಇದೀಗ ತನ್ನ ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. 


HK ಸಹಕಾರ ಸಂಘಗಳ ನಿರೀಕ್ಷಕರ ನೇಮಕಾತಿ :


                                          ಕರ್ನಾಟಕ ಲೋಕಸೇವಾ ಆಯೋಗವು (KPSC) 18-03-2023 ರಂದು ಸಹಕಾರ ಇಲಾಖೆಯಲ್ಲಿನ ಸಹಕಾರ ಸಂಘಗಳ ನಿರೀಕ್ಷಕರು 53 (HK) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 16-10-2024 ರಂದು ಅಂತಿಮ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು, ಸದರಿ ಆಯ್ಕೆಪಟ್ಟಿಯ ಆಕ್ಷೇಪಣೆಗಳನ್ನು ಸಲ್ಲಿಸಲು 7 ದಿನಗಳ ಕಾಲಾವಕಾಶವನ್ನು ನೀಡಲಾಗಿತ್ತು. ಇದೀಗ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಆಯ್ಕೆಪಟ್ಟಿಯನ್ನು KPSC ಯು ಇದೀಗ ತನ್ನ ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. 


ಆಸಕ್ತ ಅಭ್ಯರ್ಥಿಗಳು KPSC ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ, ಅಂತಿಮ ಆಯ್ಕೆಪಟ್ಟಿಯನ್ನು ಪರಿಶೀಲಿಸಬಹುದು.

Comments