KPSCಯಿಂದ ವಿವಿಧ ಇಲಾಖೆಗಳ 'ಗ್ರೂಪ್ 'ಸಿ' ಹುದ್ದೆಗಳಿಗೆ ಸಂಬಂಧಿಸಿದಂತೆ ಕೀ-ಉತ್ತರಗಳು ಇದೀಗ ಪ್ರಕಟ | ಅಭ್ಯರ್ಥಿಗಳಿಗೆ ಮಹತ್ವದ ಸುದ್ದಿ!

KPSCಯಿಂದ ವಿವಿಧ ಇಲಾಖೆಗಳ 'ಗ್ರೂಪ್ 'ಸಿ' ಹುದ್ದೆಗಳಿಗೆ ಸಂಬಂಧಿಸಿದಂತೆ ಕೀ-ಉತ್ತರಗಳು ಇದೀಗ ಪ್ರಕಟ | ಅಭ್ಯರ್ಥಿಗಳಿಗೆ ಮಹತ್ವದ ಸುದ್ದಿ!
Published by Yallamma G
03 ನವೆಂಬರ್ 2025 KPSC

                    ಕರ್ನಾಟಕ ಲೋಕ ಸೇವಾ ಆಯೋಗದಿಂದ ವಿವಿಧ ಇಲಾಖೆಗಳಲ್ಲಿನ ಹೈದರಾಬಾದ್ ಕರ್ನಾಟಕ (HK) ವೃಂದದ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗಾಗಿ 15-03-2024 ರಂದು ಅದಿಸೂಚನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.  ಇದೀಗ ಕರ್ನಾಟಕ ಲೋಕ ಸೇವಾ ಆಯೋಗವು (KPSC) ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಜ್ಞಾನ ಪತ್ರಿಕೆ-1 ಮತ್ತು ಪತ್ರಿಕೆ-2 ರ ಕೀ-ಉತ್ತರಗಳನ್ನು ಆಯೋಗದ ಜಾಲತಾಣದಲ್ಲಿ ಪ್ರಕಟಿಸಿದೆ.

          ಕರ್ನಾಟಕ ಲೋಕ ಸೇವಾ ಆಯೋಗದಿಂದ ವಿವಿಧ ಇಲಾಖೆಗಳಲ್ಲಿನ ಹೈದರಾಬಾದ್ ಕರ್ನಾಟಕ (HK) ವೃಂದದ ಗ್ರೂಪ್-ಸಿ (ಪದವಿ ಕೆಳಮಟ್ಟದ) ಹುದ್ದೆಗಳಿಗೆ ಸಂಬಂಧಿಸಿದಂತೆ ನೇಮಕಾತಿಯ ಮುಂದಿನ ಹಂತವಾದ ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಜ್ಞಾನ ಪತ್ರಿಕೆ-1  (ವಿಷಯ ಸಂಕೇತ-666) ಮತ್ತು ಪತ್ರಿಕೆ-2 (ವಿಷಯ ಸಂಕೇತ-667) ರ ಪರೀಕ್ಷೆಯನ್ನು ದಿನಾಂಕ 19/09/2025 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು.  

                    ಕರ್ನಾಟಕ ಲೋಕ ಸೇವಾ ಆಯೋಗದಿಂದ ವಿವಿಧ ಇಲಾಖೆಗಳಲ್ಲಿನ ಹೈದರಾಬಾದ್ ಕರ್ನಾಟಕ (HK) ವೃಂದದ ಗ್ರೂಪ್-ಸಿ (ಪದವಿ ಮಟ್ಟದ) ಹುದ್ದೆಗಳಿಗೆ ಸಂಬಂಧಿಸಿದಂತೆ ನೇಮಕಾತಿಯ ಮುಂದಿನ ಹಂತವಾದ ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಜ್ಞಾನ ಪತ್ರಿಕೆ-1  (ವಿಷಯ ಸಂಕೇತ-660) ಮತ್ತು ಪತ್ರಿಕೆ-2 (ವಿಷಯ ಸಂಕೇತ-661) ರ ಪರೀಕ್ಷೆಯನ್ನು ದಿನಾಂಕ 03/09/2025 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು.  

             ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಕರ್ನಾಟಕ ಲೋಕ ಸೇವಾ ಆಯೋಗವು (KPSC) ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಜ್ಞಾನ ಪತ್ರಿಕೆ-1 ಮತ್ತು ಪತ್ರಿಕೆ-2 ರ ಕೀ-ಉತ್ತರಗಳನ್ನು ಆಯೋಗದ ಜಾಲತಾಣದಲ್ಲಿ ಪ್ರಕಟಿಸಿದೆ.

                  ಅಭ್ಯರ್ಥಿಗಳು ಸದರಿ "ಕೀ ಉತ್ತರಗಳಿಗೆ ಆಕ್ಷೇಪಣೆಗಳನ್ನು ದಿನಾಂಕ : 06-11-2025ರಂದು ಸಂಜೆ 5-30 ರೊಳಗಾಗಿ ಮಾತ್ರ ತಲುಪುವಂತೆ ಕಳುಹಿಸತಕ್ಕದ್ದು. ಈ ಅವಧಿಯ ನಂತರ ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ." ಅಭ್ಯರ್ಥಿಗಳ ಆಕ್ಷೇಪಣೆಗಳು ಅಂಚೆಯ ಮೂಲಕ ಆಯೋಗಕ್ಕೆ ತಲುಪಲು ವಿಳಂಬವಾದಲ್ಲಿ ಕೆ.ಪಿ.ಎಸ್.ಸಿ.ಯು ಜವಾಬ್ದಾರಿಯಾಗಿರುವುದಿಲ್ಲ.

📌 ಆಕ್ಷೇಪಣೆಗಳನ್ನು ಸಲ್ಲಿಸವ ವಿಳಾಸ ಮತ್ತು ದಿನಾಂಕ :
ಸ್ಥಳ :
ಪರೀಕ್ಷಾ ನಿಯಂತ್ರಕರು, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು-560001 
ಕೊನೆಯ ದಿನಾಂಕ : 06-11-2025ರಂದು ಸಂಜೆ 5-30

🌐 ಪ್ರಮಖ ಅಂಶಗಳು :
1) ಆಕ್ಷೇಪಣೆಗಳನ್ನು ಕಡ್ಡಾಯವಾಗಿ ಆಯೋಗದ ಜಾಲತಾಣದಲ್ಲಿ ಪ್ರಕಟಿಸಿರುವ ನಮೂನೆಯಲ್ಲಿಯೇ (ಕನ್ನಡ ಅಥವಾ ಇಂಗ್ಲೀಷ್) ಸಲ್ಲಿಸಬೇಕು.
2) ಆಕ್ಷೇಪಣೆಗಳನ್ನು ಸಲ್ಲಿಸುವ ಪ್ರತಿ ಪ್ರಶ್ನೆಗೆ ರೂ.50/-ರಂತೆ ಶುಲ್ಕವನ್ನು (ಐ.ಪಿ.ಓ ಅಥವಾ ಡಿ.ಡಿ. ಮೂಲಕ) ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು, ಇವರ ಹೆಸರಿಗೆ ಸಂದಾಯ ಮಾಡಬೇಕು.
3) ಶುಲ್ಕ ಸಂದಾಯ ಮಾಡದ ಆಕ್ಷೇಪಣಾ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
4) ಪ್ರತಿ ಪ್ರಶ್ನೆಯ ಕೀ ಉತ್ತರಕ್ಕೆ ಸಲ್ಲಿಸುವ ಆಕ್ಷೇಪಣೆಗಳಿಗೆ ಪೂರಕವಾಗಿ ಸಲ್ಲಿಸುವ ದಾಖಲೆಗಳಿಗೆ ಸಂಬಂಧಿಸಿದಂತೆ ಲೇಖಕರ ಹೆಸರು, ಪ್ರಕಾಶನದ ಪ್ರತಿ ಇತ್ಯಾದಿ ವಿವರಗಳನ್ನು ಆಕ್ಷೇಪಣೆಗಳೊಂದಿಗೆ ನಿಗದಿತ ನಮೂನೆಯಲ್ಲಿ ನಮೂದಿಸತಕ್ಕದ್ದು.
5) ದಾಖಲೆಗಳನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸದ ಆಕ್ಷೇಪಣೆಗಳನ್ನು ತಿರಸ್ಕರಿಸಲಾಗುವುದು.
6) ದಾಖಲೆಗಳ ಪ್ರತಿ ಪುಟದ ಮೇಲೆ ಪ್ರಶ್ನೆ ಸಂಖ್ಯೆ ಮತ್ತು ನೋಂದಣಿ ಸಂಖ್ಯೆಯನ್ನು ಕಡ್ಡಾಯವಾಗಿ ಬರೆಯತಕ್ಕದ್ದು.
7) ಆಕ್ಷೇಪಣೆಯೊಂದಿಗೆ ಅಭ್ಯರ್ಥಿಯು ದೃಢೀಕರಿಸಿದ ಪ್ರವೇಶ ಪತ್ರದ ಪ್ರತಿಯನ್ನು ಪರಿಶೀಲನೆಗಾಗಿ ಲಗತ್ತಿಸಬೇಕು.

👉 ಅಭ್ಯರ್ಥಿಗಳಿಗೆ ಸಲಹೆ : ನೀವು ಪರೀಕ್ಷೆಗೆ ಹಾಜರಾದರೆ ತಕ್ಷಣವೇ ಕೀ ಉತ್ತರಗಳನ್ನು ಪರಿಶೀಲಿಸಿ, ಯಾವುದೇ ತಪ್ಪು ಕಂಡುಬಂದರೆ ನೀಡಲಾದ ಸಮಯದೊಳಗೆ ಆಕ್ಷೇಪಣೆ ಸಲ್ಲಿಸಿ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.