ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ತಾಂತ್ರಿಕ / ಗ್ರೂಪ್ ಎ, ಬಿ, ಸಿ ಹುದ್ದೆಗಳ ಲಿಖಿತ ಪರೀಕ್ಷೆಯ ಪರಿಷ್ಕ್ರತ ಕೀ ಉತ್ತರಗಳು ಪ್ರಕಟ
Published by Basavaraj Halli
06 ಜನವರಿ 2020
KPSC
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ಕಳೆದ ಡಿಸೆಂಬರ್ 16, 17, 18, 19ನೇ ತಾರೀಖಿನಂದು ವಿವಿಧ ತಾಂತ್ರಿಕ ಹಾಗೂ ಗ್ರೂಪ್ ಎ ಬಿ ಸಿ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆಸಿತ್ತು ಮತ್ತು ಈ ಹುದ್ದೆಗಳ ಲಿಖಿತ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿತ್ತು. ಸದರಿ KPSCಯು ಈ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಪರಿಷ್ಕೃತ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಬಹುದಾಗಿದೆ.