KPSC 04 ಜುಲೈ 2019 7 years ago

KPSC ಯು ರಾಜ್ಯ ಸಾರಿಗೆ ಇಲಾಖೆಯಲ್ಲಿನ 150 ಮೊಟಾರು ವಾಹನ ನಿರೀಕ್ಷಕರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದೆ

ಕರ್ನಾಟಕ ಲೋಕಸೇವಾ ಆಯೋಗವು ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 150 ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ದಿನಾಂಕ 04-02-2019 ರಂದು ಅಧಿಸೂಚನೆ ಪ್ರಕಟಿಸುವ ಮೂಲಕ ಆರಂಭಿಸಿತ್ತು. ಈ ನೇಮಕಾತಿಯ ಪ್ರಕಿಯೆಯ ವಿವಿಧ ಹಂತಗಳಾದ ಲಿಖಿತ ಪರೀಕ್ಷೆ ಮತ್ತು ಅರ್ಹತಾ ಪಟ್ಟಿ ಪ್ರಕಟಿಸಿ ಅರ್ಹ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಪ್ರಕ್ರಿಯೆಯನ್ನು ಮುಗಿಸಿದ್ದು. ಪ್ರಸ್ತುತ 1:1 ರಂತೆ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ಪ್ರಕಟಿಸಿದೆ. ಸಾರಿಗೆ ಇಲಾಖೆಯಲ್ಲಿನ ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಏನಾದರು ಆಕ್ಷೇಪಣೆಯಿದ್ದಲ್ಲಿ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆಯೋಗಕ್ಕೆ ಮನವಿ ಸಲ್ಲಿಸಲು ಅವಕಾಶವಿರುತ್ತದೆ. ಈ ಕೆಳಗೆ ನೀಡಿರುವ ಲಿಂಕ್ ಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ಪಟ್ಟಿಗಳನ್ನು ವೀಕ್ಷಿಸಬಹುದಾಗಿದೆ.
PDO ಮತ್ತು GPS ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments